Bhasaka
← Back to home

ಜಾಣ ನಿನಗೆ ಸರಿಗಾಣೆ

Author: ವಿಜಯದಾಸCategory: ಶ್ರೀಕೃಷ್ಣ
ಜಾಣ ನಿನಗೆ ಸರಿಗಾಣೆ ಪ್ರಮಾಣ ಕೊಟ್ಟ ತರುವಾಯ ತಪ್ಪುವ ನೀನಲ್ಲ ಅಸುರ ತಾರಕನು ಸುಮನಸರ ಬಳಲಿಸುತಿರಲು ಬಿಸಿಗಣ್ಣವನ ತಪಸು ಹಾನಿಮಾಡಿ ಶಶಿವದನೆ ಪಾರ್ವತಿಯಲ್ಲಿ ಗರ್ಭವನಿಡಿಸಿ ಹಸುಳೆ ಕೈಯಿಂದ ರಾಕ್ಷಸನ ಕೊಲ್ಲಿಸಿದೆ ||1|| ಶಂಬರ ದೈತ್ಯಜನ ವರದಿಂದ ಅನಿಮಿಷ-ಕ ದಂಬವನು ಸೋಲಿಸಿ ಮೆರೆವುತಿರಲು ಅಂಬುತನಯುದರದಲ್ಲಿ ಹೊಕ್ಕು ಬೆಳೆದದು ಬಂಡು ಅಂಬರರು ನಲಿಯೆ ವನಶಿರವ ಚಂಡಾಡಿದಾ ||2|| ಮನಮುಟ್ಟಿ ನಿನ್ನನು ವಂದನೆಮಾಡಿ ನರಗೆ ಮನದ ತಾಪವ ಬಿಡಿಸಿ ಮುಕ್ತಿ ಕೊಡುವಾ ಘನ ಕೃಪಾನಿಧಿ ಸಿರಿ ವಿಜಯವಿಠ್ಠಲರೇಯನ ಅನುಸರಿಸಿ ಬಾಳುವಂತೆ ಏಕಚಿತ್ತವನೀವಾ ||3||

Thoughts & Reflections

0

No reflections shared yet. Be the first to share your thoughts!

Share your thought