Bhasaka
← Back to home

ದಯವಿರಲಿ ಎನ್ನಲ್ಲಿ ಧರಣಿಧರನೆ

Author: ವಿಜಯದಾಸCategory: ಶ್ರೀಕೃಷ್ಣ
ದಯವಿರಲಿ ಎನ್ನಲ್ಲಿ ಧರಣಿಧರನೆ ಭಯಗಳನು ಪೋಗಾಡು ಭಕ್ತಜನ ಪ್ರೀಯಾ ಎರಗಿಸುವದು ಚರಣದಲಿ ಶಿರಸು ಎರಗಲಿ ನಿನ್ನ ಧ್ಯಾನದಲಿ ಮನಸು ಎರವೆರವು ಮಾಡದಲೆ ನಿನ್ನ ನಾಮಾಮೃತವ ಎರದು ಸಾಕುವದು ಸಂತತ ಎನ್ನ ಬಿಡದೆ ||1|| ಮತಿಗೆಟ್ಟ ಮಾನವಗೆ ಗತಿ ನೀನೆ ಆವಾವಾ ಶ್ರುತಿಗಳೊಳು ಪೇಳುತಿದೆ ವರದೊರದೂ ಕ್ಷಿತಿಯೊಳಗೆ ರವಿ ಶಶಿಯ ಗತಿ ತಪ್ಪಿದರೇನು ಪತಿತ ಪಾವನ ನಿನ್ನ ಕೃಪೆಗೆ ಎಣೆಗಾಣೆ ||2|| ಕೊಡುವಲ್ಲಿ ಕೊಳುವಲ್ಲಿ ಯಡಿಯಡಿಗೆ ಭಕುತಿರಸ ಕುಡಿಸುವಲಿ ಕಲಕಾಲ ಸಂತೋಷವ ಬಡಿಸಿ ಪೊರೆವಲ್ಲಿ ನಿನಗಾವಲ್ಲಿ ಸರಿಗಾಣೆ ಮೃಡನೊಡಿಯಾ ಸಿರಿ ವಿಜಯವಿಠ್ಠಲ ತಿರುಮಲೇಶಾ ||3||

Thoughts & Reflections

0

No reflections shared yet. Be the first to share your thoughts!

Share your thought