Bhasaka
← Back to home

ದಾಸ ದಾಸ ದಾಸರ ದಾಸ್ಯವ

Author: ವಿಜಯದಾಸCategory: ಶ್ರೀಕೃಷ್ಣ
ದಾಸ ದಾಸ ದಾಸರ ದಾಸ್ಯವ ಕೊಡೊ- ದೋಷ ರಾಸಿಯಳಿದು ಶ್ರೀಶ ಧೀಶ ಸರ್ವೇಶ ಸುರೇಶ್ವರ - ಭಾಸುರ ಗುಣಗಣ ಭವ್ಯ ಶರೀರ ಚಿತ್ತ ನಿನ್ನ ಪದ ಸೇವೆಯೊಳಿರಲಿ-ಚಿಂತೆ ಇತರ ಬಿಡಲಿ ಅಂತರಂಗದಲ್ಲಾನಂದಿಸಲಿ-ಅಹಂಕೃತಿಯನ್ನೆ ಬಿಡಲಿ ಸಂತತ ನಿನ್ನ ಪದ ಪಂಕಜ ಭಕ್ತರ - ಪಂಥವ ಪಾಲಿಸೊ ಪರಮ ಪುರುಷ ಹರಿ ||1|| ಅರಿಷಡ್ವರ್ಗಗಳಟವಿಯ ಖಂಡಿಸು-ಆನಂದದಲಿರಿಸು ದುರುಳರ ಸಂಗವ ದೂರ ಮಾಡಿಸು- ದುರ್ಮತಿಯನೆ ಬಿಡಿಸು ಸರಸ ಸಂಭ್ರಮ ಸನ್ನುತ ಭಕುತರೋಳ್- ನಿರುತವು ನಿಲ್ಲಿಸೋ ನೀರಜಾಕ್ಷ ಹರಿ||2|| ತ್ರಿಜಗನ್ಮೋಹನಾಕಾರ ತ್ರಿ-ಗುಣಾತೀತ ತೀರ್ಥಪಾದ ಭಜಕರ ಪಾವನ ಭವನುತ ಚರಣ-ಋಜಗಣನುತಾಭರಣ ವಿಜಯವಿಠ್ಠಲಾಧೀಶ ವಿಶ್ವೇಶ್ವರ ಕುಜನ ವಿದಾರಣ ಕೋವಿದನುತ ಹರಿ ||3||

Thoughts & Reflections

0

No reflections shared yet. Be the first to share your thoughts!

Share your thought