Bhasaka
← Back to home

ಧನ್ಯನೋ ಶೇಷಗಿರಿದಾಸ ನೀನೂ

Author: ವಿಜಯದಾಸCategory: ಶ್ರೀಕೃಷ್ಣ
ಧನ್ಯನೋ ಶೇಷಗಿರಿದಾಸ ನೀನೂ ಪುಣ್ಯವಂತನು ಅಹುದೊ ಮನೊ ವಾಚದಲಿ ನಿತ್ಯ ಮುಂಗೈಯ ಮ್ಯಾಲಿನ ಗಿಳಿ ಹಾರಿಹೋದಂತೆ ರಂಗ ಮಧ್ವನ ಸ್ಮರಣೆ ಮಾಡಿಕೊಳುತ ಮಂಗಳಾಂಗನಾಗಿ ಸ್ವರ್ಗಸ್ಥನಾದಿ ಕ್ಷಣ ಭಂಗುರವೆಂಬ ಪ್ರಮಾಣ ಸಿದ್ಧಿಸಿತು ಗಡ ||1|| ಸತ್‍ಶಿಷ್ಯನೆಂದೆನಿಸಿಕೊಂಡದಕೆ ಎನ್ನ ಮ ನೋತ್ಸಾಹ ಮಾತ್ರ ಬಂದಾಗಲಿಲ್ಲಾ ವತ್ಸ ಕೇಳು ಉಪಸರ್ಗ ಕೂಡಿದ ನಾಭಿ ತತ್ಸಮಾನಾಯಿತೊ ಇಂದಿನಾರಭ್ಯವೂ||2|| ಒಂದೆ ಪ್ರವಾಹದೊಳು ಈಸು ಬೀಳಲು ಸುಳಿ ಯಿಂದ ಹಿಂದಕೆ ಒಬ್ಬನಿಂದಂತೇವೆ ಇಂದು ಎನಗಾಯಿತೊ ಭೂಮಿಯೊಳಗೆ ಋಣಾನು- ಬಂಧ ಇಂತಿರಲಿಕ್ಕೆ ಯತ್ನ ಒಬ್ಬರದಿಲ್ಲ||3|| ಪರಿಣಾಮಕೆ ನಿನಗೆ ಸಾನುಕೂಲಾವಾಗಿ ಅನಿಲದೇವನು ಒಲಿದು ಹರಿಯ ಕೂಡಾ ಪ್ರಣಮಪೂರ್ವಕದಿಂದ ಪಂಚತ್ವ ಐದಿದೆ ಸಾ- ಧನ ಪೂರ್ತಿಕಾಲ ಎಳ್ಳನಿತು ಉಳದಿಪ್ಪದೊ ||4|| ವಿಧಿ ಸಂವತ್ಸರ ಭಾದ್ರಪದ ಶುಕ್ಲದ ಭಾನು ಬಿದಿಗೆಯಲಿ ಪ್ರವರ ಗೌತಮ ಸಂಗಮಾ ನಿಧಿಯಲಿ ವಿಜಯವಿಠ್ಠಲನಂಘ್ರಿಯುಗಳವನು ಹೃದಯದಲಿ ಇಟ್ಟು ದೇಹವ ತ್ಯಾಗಮಾಡ್ದೆ ||5||

Thoughts & Reflections

0

No reflections shared yet. Be the first to share your thoughts!

Share your thought