Bhasaka
← Back to home

ನರಕ ಎತ್ತಣದೋ ನರಕ

Author: ವಿಜಯದಾಸCategory: ಶ್ರೀಕೃಷ್ಣ
ನರಕ ಎತ್ತಣದೋ ನರಕ ಎತ್ತಣದೋ ನರ ಕಂಠೀರವನೆಂದು ಸ್ಮರಿಸುವ ಜನರಿಗೆ ಸ್ನಾನ ಮಾಡುವುದೇಕೆ ಧ್ಯಾನಗೈಯುವುದೇಕೆ ದಾನ ಧರ್ಮಂಗಳು ಮಾಡಲೇಕೆ ಶ್ರೀ ನಾರಾಯಣನೆಂದು ಆವಾಗಲೂ ಜಿಹ್ವೆ ತ್ರಾಣದಲಿ ಬಿಡದೆ ಎಣಿಸುವ ಜನರಿಗೆ||1|| ತೀರ್ಥ ಮೀಯುವದೇಕೆ ಯಾತ್ರೆ ಚರಿಪದೇಕೆ ಸ್ತೋತ್ರ ಮಂತ್ರಾದಿಗಳು ಪಠಿಸಲೇಕೆ ಚಿತ್ರಮಹಿಮ ನೀಲಗಾತ್ರನ್ನ ಚರಿತೆ ಕಾ ಲತ್ರಯ ಬಿಡದೆ ಉಚ್ಚರಿಸುವ ಜನರಿಗೆ ||2|| ದೀಪ ಧೂಪಗಳೇಕೆ ನಾನಾ ಪರಿಯಲ್ಲಿ ಸೋಪಸ್ಕರದ ಎಡೆ ಇಡಲೇತಕೆ ಅಪಾರ ಮಹಿಮ ಅನಾಥರೊಡೆಯ ರಂಗ ಶ್ರೀಪತಿ ಎಂದೀಗ ಸ್ಮರಿಸುವ ಜನರಿಗೆ ||3|| ಭೂತದಯಗಳೇಕೆ ನೀತಿ ಎಂಬುದು ಏಕೆ ಜಾತವೇದಸನಲ್ಲಿ ಕಳವಳವೇಕೆ ಪೀತಾಂಬರಧರ ಪಿನಾಕಿ ಸಖನೆಂದು ಮಾತು ಮಾತಿಗೆ ನೆನೆದು ಸುಖಿಸುವ ಜನರಿಗೆ ||4|| ಏನೇನು ಕರ್ಮದಾಚರಣೆ ಮಾಡುವದೇಕೆ ಭಾನು ಉದಯವಿಡಿದು ತೊಳಲಲೇಕೆ ದೀನನಾಗಿ ದಾತಾ ವಿಜಯವಿಠ್ಠಲ ಹರಿಯ ಮಾನಸದಲಿ ಧ್ಯಾನ ಮಾಡುವ ಜನರಿಗೆ ||5||

Thoughts & Reflections

0

No reflections shared yet. Be the first to share your thoughts!

Share your thought