Bhasaka
← Back to home

ನಾಮತ್ರಯ ನೆನೆಯಿರೊ

Author: ವಿಜಯದಾಸCategory: ಶ್ರೀಕೃಷ್ಣ
ನಾಮತ್ರಯ ನೆನೆಯಿರೊ ಕಾಮಕ್ರೋಧವು ಹರಿದು ಬೈಲಾಗಿ ಪೋಗುವುದು ಅಚ್ಯುತಾ ಅಚ್ಯುತಾ ಎಂದು ಸ್ಮರಣೆಯನು ಮಾಡಿದರೆ ದುಶ್ಚರಿತವೆಂಬ ಮಹ ಕಾನನಕ್ಕೆ ಕಿಚ್ಚಾಗಿ ದಹಿಸುವುದು ನಿಮಿಷದೊಳಗೆ ಶುದ್ಧ ನಿಚ್ಚಳವಾಗಿದ್ದ ಸುಜ್ಞಾನ ಪಾಲಿಪದು||1|| ಅನಂತ ಅನಂತ ಎಂದು ಮನದಲ್ಲಿ ನೆನೆಯೆ ನಾನಾ ಭವಬಂಧ ದುಷ್ಕರ್ಮದಿ ಹೀನಾಯವನು ಕಳೆದು ಹಿತದಿಂದಲಿ ವೊಲಿದು ಆನಂದ ಆನಂದವಾದ ಫಲ ಕೊಡುವುದು. ||2|| ಗೋವಿಂದ ಗೋವಿಂದ ಎಂದು ಧ್ಯಾನವ ಮಾಡೆ ಗೋವಿಂದ ಕಡೆಹಾಕಿ ಸಾಕುವದು ದೇವೇಶ ಶಿರಪತಿ ವಿಜಯವಿಠ್ಠಲೇಶನ ಸೇವೆ ಸತ್ಕಾರ್ಯದಲಿ ಪರಿಪೂರ್ಣವಾಗಿಹುದು ||3||

Thoughts & Reflections

0

No reflections shared yet. Be the first to share your thoughts!

Share your thought