Bhasaka
← Back to home

ನಿಚ್ಚಳಾಗಲಿ ಬೇಕು ತಿಳಿದು

Author: ವಿಜಯದಾಸCategory: ಶ್ರೀಕೃಷ್ಣ
ನಿಚ್ಚಳಾಗಲಿ ಬೇಕು ತಿಳಿದು ನಿಚ್ಚಳಾಗಲಿ ಬೇಕು ನಿಚ್ಚಮಾಡುವ ದೋಷರಾಶಿಗಳಳಿದು ನಿಚ್ಚಳಾಗಲಿ ಬೇಕು ಪಾಪವೆಂಬುದು ಹೊರಗಿಹುದೆ ತನ್ನ ಕೋಪವಲ್ಲದೆ ಬೇರೆ ಹೊಸದಾಗಿ ಬಹುದೆ ಅಪವರ್ಗಕೆ ಮಾರ್ಗವಹುದೆ ಬಲು ತಾಪಸಿಗಾದರು ಅದು ಸಾಧನವಹುದೆ ||1|| ಪುಣ್ಯವೆಂಬದು ಬೇರೆಯಿಲ್ಲಾ ನಾನಾ ರಣ್ಯ ಚರಿಸಿದರು ದೊರಕುವದಲ್ಲಾ ಮನ್ಯು ಬಿಡದೆ ಮತ್ತೊಂದಲ್ಲಾ ನಿರುತ ಅನ್ಯರಾಶಿ ಬದಲು ಗತಿಗವಸಲ್ಲಾ ||2|| ವೈಕುಂಠವೆಂಬೋದು ಅಲ್ಲೆ ಬರಿದೆ ಲೌಕೀಕ ತೊರದರೆ ಇಪ್ಪದು ಇಲ್ಲೆ ಈ ಕಲಿಯೊಳಗೆ ಈ ಸೊಲ್ಲೆವೊಲಿಸ ಬೇಕೆನೆ ಮಾರಿ ಓಡುವುದು ನಾ ಬಲ್ಲೆ ||3|| ಹರಿಸ್ಮರಣೆಗೆ ಪೋಪ ದೋಷ ಬಲು ಪರಿ ಪರಿ ಧರ್ಮವ ಮಾಡಲು ಲೇಶ ಸರಿಯಾವು ತರುವಾಯ ಮೋಸದಿಂದ ತಿರುಗಿ ತಿರುಗಿ ಪುಟ್ಟಿ ಬಡವನು ಕ್ಲೇಶಾ||4|| ಒಬ್ಬರ ಸರಿಗಟ್ಟದಿರೊ ನಿನ ಗ್ಹಬ್ಬಿದಷ್ಟೆ ಕರ್ಮ ಸುಖವೆಂದು ಸಾರೊ ಉಬ್ಬಲ ದಾಡಿಪರಾರೊ ಎಲೆ ಲ್ಹಬ್ಬಿದ ವಿಜಯವಿಠ್ಠಲನೆಂದು ಸಾರೋ ||5||

Thoughts & Reflections

0

No reflections shared yet. Be the first to share your thoughts!

Share your thought