Bhasaka
← Back to home

ನಿನಗಿಂತ ಅಧಿಕರು ನಿನ್ನಯ ಭಕುತರು

Author: ವಿಜಯದಾಸCategory: ಶ್ರೀಕೃಷ್ಣ
ನಿನಗಿಂತ ಅಧಿಕರು ನಿನ್ನಯ ಭಕುತರು ಇದಕೆ ಅನುಮಾನಗೊಳಬೇಡ ಅಂಬುಧಿಶಯನ ಪದಿನಾಲ್ಕು ಲೋಕಗಳು ಪೊತ್ತೆನೆಂದೆನಬೇಡ ಅದುಸಹಿತ ನಿನ್ನನು ಹೃದಯದೊಳಗೆ ಹುದುಗಿಕೊಂಡಿಪ್ಪರೋ ಪದುಮನಾಭನೆ ಕೇಳೊ ಇದರಿಂದ ಸರಿಮಿಗಿಲು ಆರೊ ಜನದೊಳಗೆ ||1|| ವನಜಾಂಡಗಳೆಲ್ಲ ಪೊತ್ತೆನೆಂದೆನಬೇಡ ಕೊನೆಯ ನಾಲಿಗೆಯಲ್ಲಿ ನಿನ್ನ ನಿಲಿಸಿ ಅಣುಮಾತ್ರ ಭಾರ ಇಲ್ಲದಂತಿಪ್ಪರೊ ಘಣಿಶಯನ ಅಧಿಕಸಮರಾರೊ ಜಗದೊಳಗೆ ||2|| ಅಣುಮಹತ್ತು ಆದೆನೆಂದೆನೆಬೇಡವೊ ಗಣನೆ ಇಲ್ಲದೆ ನಿನ್ನ ಕರದಿ ಮುಚ್ಚಿ ಘಣಿ ಆಹಾರಗಾಮಿ ನಾ ವಿಜಯವಿಠ್ಠಲ ನಿನಗೆ ಮಣಿದು ಲೆಕ್ಕಿಸರೋ ನಿನ್ನನು ಮೆಚ್ಚಿದಾಳುಗಳು||3||

Thoughts & Reflections

0

No reflections shared yet. Be the first to share your thoughts!

Share your thought