Bhasaka
← Back to home

ನಿನ್ನ ದರುಶನಕೆ ಬಂದವನಲ್ಲವೊ

Author: ವಿಜಯದಾಸCategory: ಶ್ರೀಕೃಷ್ಣ
ನಿನ್ನ ದರುಶನಕೆ ಬಂದವನಲ್ಲವೊ ಪುಣ್ಯವಂತರ ದಿವ್ಯ ಚರಣ ನೋಡಲಿ ಬಂದೆ ಎಲ್ಲೆಲ್ಲಿ ನಿನ್ನ ವ್ಯಾಪ್ತತನವಿರಲಿಕ್ಕೆ ಇಲ್ಲಿಗೆ ಬರುವ ಕಾರಣವಾವುದೊ ಸೊಲ್ಲಿಗೆ ಕಂಭದಲಿ ತೋರಿದ ಮಹಾಮಹಿಮ ಅಲ್ಲಿ ಇಲ್ಲೇನಯ್ಯ ಬಲ್ಲ ಭಜಕರಿಗೆ||1|| ಕರೆದಾಗಲೆ ಓಡಿ ಬಂದೊದಗುವ ಸ್ವಾಮಿ ಮರಳಿ ಗಾವುದ ಎಣಿಸಿ ಬರಲ್ಯಾತಕೊ ನೆರೆ ನಂಬಿದವರಿಗೆ ಆವಲ್ಲಾದರೇನು ಅರಿದವರ ಮನದೊಳಗೆ ನಿಂದಾಡುವ ಚಂದವಾ ||2|| ಕಠಿನವೊ ನಿನ್ನ ಭಕುತರನ ನೋಡುವ ಲಾಭ ಸಟೆಯಲ್ಲಾ ವೇದಗಳು ಸಾರುತಿವಕೊ ವಟು ಮೊದಲಾದ ವೈಷ್ಣವಾಗ್ರೇಸರಂಘ್ರಿ ತ್ರಿಟಿಯಾದರೂ ಎನಗೆ ಸೋಕಲು ಗತಿಗೆ ದಾರಿ||3|| ಧ್ಯಾನಕ್ಕೆ ಸಿಲುಕುವನೆ ನಿನ್ನ ಕಾಣಲಿಬಹುದು e್ಞÁನಿಗಳು ಎಂತು ಬರುವರೊ ಅಲ್ಲಿಗೆ ಅನಂತ ಜನುಮದಲ್ಲಿ ಜಪ ತಪ ಹೋಮ ವ್ರತ ಏನೇನು ಮಾಡಿದರು ಇಷ್ಟು ಜನ ಕೂಡುವದೇ||4|| ನೀನಿದ್ದ ಸ್ಥಾನದಲಿ ಸಕಲ ಪುಣ್ಯಕ್ಷೇತ್ರ ನೀನಿದ್ದ ಸ್ಥಾನದಲಿ ಸರ್ವತೀರ್ಥ ನೀನಿದ್ದ ಸ್ಥಾನದಲಿ ಸಮಸ್ತ ತಾತ್ವಿಕರು ನಾನಿತ್ತ ಬರುವುದು ನಿನಗೆ ತಿಳಿಯದೆ ಸ್ವಾಮಿ||5|| ಇದನೆ ಲಾಲಿಸು ಜೀಯಾ ನಿನ್ನದೊಂದೇ ಮೂರ್ತಿ ನಿದರುಶನವಲ್ಲದೆ ಮಿಗಿಲಾವುದೊ ಪದೋಪದಿಗೆ ಮಧ್ವಮತ ಹೊಂದಿದ ಸುಜನರ ಹೃದಯದೊಳಗಾನಂತಪರಿ ನಿನ್ನ ರೂಪಗಳು ||6|| ಭಳಿರೆ ತಿರುಮಲರಾಯ ನಿನ್ನ ಕರುಣಾ ರಸಕೆ ನೆಲೆಗಾಣೆನೆಲೆ ಸೆರೆಹೊರೆಯೊಳು ವೊಲಿದು ಭಕುತರಿಗಾಗಿ ಮದುವೆ ಹಮ್ಮಿಕೊಂಡೆ ಸುಲಭ ದೇವರದೇವ ವಿಜಯವಿಠ್ಠಲ ವೆಂಕಟಾ||7||

Thoughts & Reflections

0

No reflections shared yet. Be the first to share your thoughts!

Share your thought