Bhasaka
← Back to home

ನೀನೆ ಮಾಡಿದ ಲೀಲೆ ಬಲು ಸುಖವೊ

Author: ವಿಜಯದಾಸCategory: ಶ್ರೀಕೃಷ್ಣ
ನೀನೆ ಮಾಡಿದ ಲೀಲೆ ಬಲು ಸುಖವೊ | ಆನೇನು ದು:ಖವನು ಬಡುವುದಿಲ್ಲವೋ ಜೀಯ | ತೋಟವನು ಮಾಡಿಸಿ ಅದರೊಳಗೆ ಒಂದು ಫಲ | ನಾಟಿಸಲು ಬೆಳೆದ ಫಲ ಪಕ್ವವಾಗೆ | ನೀಟಾದ ಫಲವೆಂದು ಅರಸು ಕೊಯ್ ತರಿಸಲು ತೋಟಿಗಾಗೇನು ದು:ಖ ಅರಸಿನಿಂಗೇನೈಯ||1|| ನಿನ್ನ ಸಂಕಲ್ಪನೆ ಸ್ಥಿರವಾಗಿ ಇದೆ ಇದೆ ಅನಂತ ವೇದಗಳು ಪೊಗಳೂತಿವಕೊ ಪನ್ನಗಶಯನನೆ ನೀನು ಮಾಡಿದ ಕ್ಲುಪ್ತ ಅನ್ಯಥಾವಾಗುವದೆ ಅನುಭವಾದಿಗಳಿಗೆ ||2|| ಸುಖ ದು:ಖವೆ ಎರಡು ನಿನ್ನ ವಶವಾಗಿದೆ ಸಖನಾಗಿ ಸುಖ ಉಣಿಸಲು ಹಿಗ್ಗುವೆ ದು:ಖ ತಂದಿತ್ತರೆ ಅಳಲಿ ಬಳಲುವದ್ಯಾಕೆ ಅಖಿಳ ನೀನಾವದಿತ್ತದೇ ಬಲು ಲೇಸು ||3|| ನೀನೆ ಕಲ್ಪಿಸಿದರೆ ಸೈರಿಸಲಾರದೆ ವೇಗ | ನಾನು ವ್ಯಧಿಕರಣ ಪೇಳಿದರಾಯಿತೆ | ಆನಂದಕೆ ಹ್ರಾಸ ಬರುವುದೆ ಶಾಶ್ವತ | ಏನಾದರೇನು ನೀನಾಡಿದಾಟವೆ ಸಮ್ಮತ ||4|| ಸತ್ಪಾತ್ರರಾ ನೋಡಿ ದಾನವಿತ್ತರೆ ಅವಗೆ | ಉತ್ತಮಾ ಪದ ಉಂಟು ಪುಶಿಯಲ್ಲವೋ | ಸತ್ಪಾತ್ರ ನೀನೆಂದು ಪುತ್ರಾಖ್ಯ ಧನವಿತ್ತೆ | ಉತ್ತುಮಾ ಗತಿ ನೀಯೋ ವಿಜಯವಿಠ್ಠಲ ಕರುಣಿ ||5||

Thoughts & Reflections

0

No reflections shared yet. Be the first to share your thoughts!

Share your thought