Bhasaka
← Back to home

ನೆನೆದು ನೆನೆಸಿ ನಿಮ್ಮ

Author: ವಿಜಯದಾಸCategory: ಶ್ರೀಕೃಷ್ಣ
ನೆನೆದು ನೆನೆಸಿ ನಿಮ್ಮ ತನುಮನದಲ್ಲಿ ಯೋಚನೆ ಮಾಡೀ ಎಣಿಸಿ ಗುಣಿಸಿ ಮನಸಿಜನ್ನ ಜನಕನ ಲೀಲೆ ನರನಾರಾಯಣನೀತ ಕೃಷ್ಣ ಹರಿ ಹೃದ್ಭಾನು ಕಪಿಲನೀತ ಹರಿನಾರಾಯಣೇನೀತ ಯೋಗೀ ಶ್ವರ ತಾಪಸ ವೈಕುಂಠನೀತ ಹರನಸಖ ಸ್ವಧಾಮನೀತ ತುರಗವದನನೀತ ದಯಾ ಕರುಣಿ ಸಾರ್ವಭೌಮನನೀತಾ ||1|| ಅಜಿತಯಜ್ಞನಾಮನೀತ ಅಜಗೆ ಪೇಳಿದ ಹಂಸನೀತ ಸುಜನಪಾಲ ವ್ಯಾಸ ವೀ ರಜ ಮಹಿದಾಸ ದತ್ತನೀತ ನಿಜ ಮಹಿಮ ಧನ್ವಂತ್ರಿ ಈತ ತ್ರಿಜಗವಳೆದುಪೇಂದ್ರನೀತ ಭಜಕರೊಡಿಯ ವಿಷಕ್ಸೇನ ಭುಜಗಶಾಯಿವಿಭುವೆ ಈತ ||2|| ಚಲುವ ಧರ್ಮಶೇತು ಈತ ಬಲುವುಳ್ಳ ಶಿಂಶುಮಾರನೀತ ಪೊಳೆವ ಮತ್ಸ್ಯ ಕೂರ್ಮವರಹ ಲಲಿತನರಸಿಂಹನೀತ ಬಲಿಗೊಲಿದ ವಾಮನ್ನನೀತ ಕುಲವೈರಿ ರಘರಾಮನೀತ ಕಳುವು ಮಾಡಿದನೀತ ಬತ್ತಲೆ ಕಲಕಿ ರೂಪನಾದನೀತಾ ||3|| ಪುರುಷನಾಮಕನೀತ-ವಿ ಸ್ತರ ವಾಸುದೇವ ಜಯಪತಿ ಸುಂ ದರ ಪ್ರದ್ಯುಮ್ನ ಈತ ನಿರಂತರ ಅನಿರುದ್ಧನೀತ ಚ ತುರ ವಿಂಶತಿ ಮೂರುತಿಯೇ ಈತ ಮೆರೆವ ಅಜಾದಿ ನಾಮಕನೀತ ವರ ಪಂಚಮೂರುತಿಯೇ ಈತಾ ಎರಡೈದು ಮೇಲೊಂದನೀತ ||4|| ಪರಿಪರಿ ರೂಪ ಉಳ್ಳನೀತ ಹೊರಗೆ ಒಳಗೆ ವ್ಯಾಪ್ತನಾಗಿ ಸರಿಸರಿ ಬಂದ ತೆರದಿ ಜಗವ ಸರಸದಲಿ ಆಡಿಪನೀತ ಸ್ಮರಣೆ ಮಾಡಲು ಸಕಲ ಇಷ್ಟವ ಕರೆದು ಕೊಡವನೀತ ಶಿರಿಯರಸ ವಿಜಯವಿಠ್ಠಲನೀತ ಮರಣ ಜನನರಹಿತ ನೀತ ||5||

Thoughts & Reflections

0

No reflections shared yet. Be the first to share your thoughts!

Share your thought