Bhasaka
← Back to home

ನಿನ್ನ ಬಾಳಿನ ಹೊಲವು

Author: ವಚನವೇದCategory: ವೈರಾಗ್ಯRaaga: ಬಾವುಲ್Taala: ಝಪತಾಲ
ನಿನ್ನ ಬಾಳಿನ ಹೊಲವು ಪಾಳು ಬಿದ್ದಿಹುದಲ್ಲೊ ಕೃಷಿಗೈಯಲೂ ಕೂಡ ತಿಳಿಯದಿರುವೆ | ಎಂಥ ಹೊನ್ನನು ಬೆಳೆದು ತೆಗೆಯಬಹುದಾಗಿತ್ತೊ ಕೆಲವು ದಿನ ಮೈಮುರಿದು ದುಡಿದಿದ್ದರೆ || ಈಗಲಾದರು ತಾಯ ಶ್ರೀನಾಮವೆಂತೆಂಬ ಬೇಲಿಯನು ಕಟ್ಟಿ ನೀ ಕಾಯ್ದುಕೊಳ್ಳೊ | ಅದಕಿಂತ ಬಲವಾದ ಕಾವಲಿನ್ನಾವುದಿದೆ ಮೃತ್ಯುವೂ ನಿನ್ನ ಬಳಿ ಬರಲಾರನೊ || ಇಂದೊ ನಾಳೆಯೊ ಹೊಲವ ಹೊಲದೊಡೆಯಗೊಪ್ಪಿಸುವ ಮುನ್ನವೇ ಎಚ್ಚೆತ್ತು ಬೆಳೆಯ ತೆಗೆಯೊ । ಗುರುವಿತ್ತ ಮಂತ್ರವನು ಬೀಜವಾಗಿಸಿ ಬಿತ್ತಿ ಪ್ರೇಮವಾರಿಯ ಹೊಯ್ದು ಹಸನುಗೊಳಿಸೊ । ನಿನಗೆ ಈ ಕೆಲಸವೂ ಕಷ್ಟವಾದರೆ ಹೇಳು ರಾಮಪ್ರಸಾದನಿದೊ ನೆರವಿಗಿಹನೊ ||

Thoughts & Reflections

0

No reflections shared yet. Be the first to share your thoughts!

Share your thought