← Back to home
ನೀನಲ್ಲದಿನ್ನಾರು
Author: ಸ್ವಾಮಿ ತದ್ರೂಪಾನಂದCategory: ಶ್ರೀರಾಮಕೃಷ್ಣRaaga: ಸಾಹಾನಾTaala: ಝಪತಾಲ
ॐ
ನೀನಲ್ಲದಿನ್ನಾರು ಚಿರಬಂಧು ಎನಗೆ
ನಿನ್ನನ್ನೆ ಕರೆಯುತಿಹೆ ಹೃದಯದೇಗುಲಕೆ ||
ಕಾತರದ ಅಳಲಿನಲಿ ಪರಿಪೂತ ಹೃದಯವದು
ಕ್ಷೇತ್ರವೆನೆ ಆಗಿಹುದು ದಕ್ಷಿಣೇಶ್ವರವು |
ಜನ್ಮಜನ್ಮಾಂತರದ ಸಂಸ್ಕಾರತರುರಾಜಿ
ಪಂಚವಟಿಯಂದದಲಿ ಮಿಗೆ ಒಪ್ಪುತಿಹುದು ||
ಹಗಲಿರುಳು ಎನ್ನೆದೆಯ ಹಂಬಲಿನ ಹೊನಲದುವೆ
ಜಗವ ಪಾವನಗೈವ ಗಂಗೆಯಾಗಿಹುದು |
ಜೀವಿಗಳ ಎದೆಯಲ್ಲಿ ಅನವರತ ನೆಲೆಸಿರುವ
ದೇವತೆಯೆ ಇಲ್ಲೀಗ ಮಾತೆ ಭವತಾರಿಣೀ ||
ಹೇ ದಿವ್ಯ ಅರ್ಚಕನೆ ಪಂಚವಟಿಪ್ರಿಯನೆ
ಭವತಾರಿಣೀತನಯ ಸುರನದಿಯ ಭಕ್ತ |
ಬಂದಿಲ್ಲಿ ಎಚ್ಚರಿಸು ಪ್ರೇಮಮಯಿ ಜನನಿಯನು
ಬಂಧನವು ಹರಿಯುವುದು ಮಾತೆಯೊಲುಮೆಯಲಿ ||
Thoughts & Reflections
0No reflections shared yet. Be the first to share your thoughts!