Bhasaka
← Back to home

ಪಾಹಿ ಮೋಹನ ವಿಠಲ

Author: ವಿಜಯದಾಸCategory: ಶ್ರೀಕೃಷ್ಣ
ಪಾಹಿ ಮೋಹನ ವಿಠಲ ಪರಮಕರುಣಾಜಲಧಿ ಮಹದಾದಿ ದೇವ ವಂದ್ಯ | ಮೋಹಪಾಶವ ಬಿಡಿಸಿ ನಂಬಿದವನಿಗೆ ಒಲಿದು ರಹಸ್ಯಮತಿ ಕೊಡುವುದು ಸ್ವಾಮಿ ನೀನಿತ್ತ ಮಾತುಗಳು ಪೊಳ್ಳಾಗಬಲ್ಲವೆ ಅನಂತ ಜನುಮವಾಗೆ ಆನೊಬ್ಬನೆನ್ನದಿರು ಕೀರ್ತಿಸುವ ನರನೆಂದು e್ಞÁನಿಗಳಿಗರಿವಾಗಿದೆ ಏನಯ್ಯ ನಿನ್ನಂಘ್ರಿ ಭಜಿಸದಲೆ ಇರುತಿಪ್ಪ ಮಾನವನ ಕ್ಲೇಶಕೆಣಿಯೆ ಆನಂದ ನಂದನನೆ ತೃಣವ ಪಿಡಿದು ರುತುನ ವನು ಮಾಡಿ ತೋರುವ ಸ್ವಾಮಿ ||1|| ನಿನ್ನಧೀನ ಕರ್ಮಸ್ವಭಾವ ಮೊದಲಾಗಿ ಅನ್ಯಥಾ ಯಲ್ಲಿ ಕಾಣೆ ಮನ್ನಿಪುದು ಮುದದಿಂದ ಮುಂದನೆನ್ನದೆ ಎನ್ನ ಬಿನ್ನಪವ ಬರಿದೆನಿಸದೆ ಅನ್ಯನಿವನಲ್ಲವೊ ಎನ್ನನ್ನೆ ಪೊಂದಿದ ನಿನ್ನ ದಾಸನ ದಾಸನು ಉನ್ನಂತ ಗುಣವಿತ್ತು ಉರುಕಾಲ ಒಲಿದು ಪ್ರ ಸನ್ನನಾಗೋ ಪಾವನ್ನರನ್ನ ||2|| ನರರಿಗೆ ಸಾಧನ ಸತ್ಕೀರ್ತನೆ ಎಂದು ಪರಮೇಷ್ಠಿ ಒರೆದನಿದಕೊ ಪರಿಪರಿ ಬಗೆಯಿಂದ ಕರ್ಮಗಳ ಮಾಡಿದರೆ ದುರಿತ ಬೆಮ್ಮೊಗವಾಗವು ಪಿರಿದಾಗಿ ಬೇಡಿದೆನೊ ವಿಜಯವಿಠ್ಠಲ ನಿನ್ನ ಶರಣರೊಳಗಿಟ್ಟು ಕಾಪಾಡು ಸ್ಥಿರವಾಗಿ ಅಂಕಿತವ ಪ್ರೇರಿಸಿ ಕೊಡಿಸಿದ್ದು ಧರೆಯೊಳಗೆ ಪರಿಪೂರ್ಣವಾಗಿ ಇರಲಿ ಸ್ವಾಮಿ||3||

Thoughts & Reflections

0

No reflections shared yet. Be the first to share your thoughts!

Share your thought