Bhasaka
← Back to home

ಪ್ರಾಯಶ್ಚಿತ್ತವು ಎನಗೆ ಇಲ್ಲವಯ್ಯಾ

Author: ವಿಜಯದಾಸCategory: ಶ್ರೀಕೃಷ್ಣ
ಪ್ರಾಯಶ್ಚಿತ್ತವು ಎನಗೆ ಇಲ್ಲವಯ್ಯಾ ನಾಯಿಯಂತೆ ಕಂಡ ಕಂಡಲ್ಲಿ ತಿಂಬುವಗೆ ಮಾನಸದಿ ತ-ದೇಕ ಧ್ಯಾನದಲ್ಲೇ ಕುಳಿತು e್ಞÁನಿಗಳ ಸಹವಾಸ ಮಾಡದಲೆ ಹೀನರಾಶ್ರೈಸೆ ನಾಲಿಗ್ಯೆ ಹಿತವನೆ ಬಯಸಿ ಮೀನು ಗಾಣಕೆ ಬಿದ್ದು ಮಿಡುಕುವಂದದಲಿ ||1|| ಸರಸರನೆ ಕಂಠವನು ಗರಗಸದಿ ಕೊಯ್ದರೂ ತರಹರಿಸದೇ ಪರರ ಮನೆಯನ್ನವನ್ನು ಕರದಲಿ ಸ್ಪರ್ಶ ಸಲ್ಲದು ಎಂದು ಪೇಳುತಿರೆ ಹಿರಿದಾಗಿ ಕುಳಿತು ಭುಂಜಿಸುವ ಪಾತಕಿಗೆ||2|| ಪರರಿತ್ತ ಕೂಳಿನಲಿ ಅವರ ಕುಲಕೋಟಿ ಸಾ- ವಿರ ಜನುಮದಲಿ ಅರ್ಜಿಸಿದ ಪಾಪ ಬೆರೆತಿಹುದು ಎಂದ್ಹೇಳಿ ಕೇಳಿ ಕೇಳಿ ನಗುತ ಹರುಷದಿಂ ಕುಳಿತು ವಿಷವುಂಬ ಪಾತಕಿಗೆ ||3|| ಯಾತ್ರೆಯ ಪೋಪಲ್ಲಿ ತಿಥಿ ಮತಿ ಹವ್ಯದಲಿ ಮತ್ತೆ ಕುಲಹೀನದಲಿ ಅನ್ನ ತಿಂದು ನಿತ್ಯ ಹಿಂಗದಲೆ ಈ ನೀಚ ಒಡಲನು ಹೊರೆವ ತೊತ್ತು ಬಡುಕಗೆ ಪುಣ್ಯವೆತ್ತ ದೊರಕುವುದೊ ||4|| ಕ್ಷಿಪ್ರ ಪ್ರಾಯಶ್ಚಿತ್ತ ಪೊಂದಿಹುದು ಕೇಳಯ್ಯಾ ಈ ಪೃಥ್ವಿಯೊಳಗೆಲ್ಲ ನಿನ್ನ ನಾಮ ಅಪ್ರಾಕೃತ ಕಾಯ ವಿಜಯವಿಠ್ಠಲರೇಯ ಸುಪ್ರಸಾದವನಿತ್ತು ಶುದ್ಧಾತ್ಮನನು ಮಾಡು ||5||

Thoughts & Reflections

0

No reflections shared yet. Be the first to share your thoughts!

Share your thought