Bhasaka
← Back to home

ಬಾ ಬಾ ಭಕುತರ ಹೃದಯ ಮಂದಿರ

Author: ವಿಜಯದಾಸCategory: ಶ್ರೀಕೃಷ್ಣ
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ ||1|| ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ ||2|| ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು||3|| ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ ||4|| ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ಬಾರಿಬಾರಿಗೆ ನಿಮ್ಮ ಹಾರೈಸಿ ಆನಂದ ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು ||5|| ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಇಂದು ನಿನಗೆ ಈ ರಥವ ನಡೆಸುವುದು ಅಂದವಾಗಿಹುದೇನೊ ದೇವ||6|| ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗ ಅಂಗಜ ಜನಕ ಸಾ- ರಂಗ ರಥಾಂಗ ಪಾಣಿ ಸಂಗ ನಿಸ್ಸಂಗ ಮಾತಂಗ ವಿಹಂಗ ಪ್ಲ- ವಂಗ ನಾಯಕ ಪರಿಪಾಲ ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ ||7|| ತಡಮಾಡಲಾಗದೊ ಪೊಡವೀಶ ನೀನಿಂದು ತಡೆಯದಲೆ ಪೊರಟರೆ ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ ||8|| ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ ||9||

Thoughts & Reflections

0

No reflections shared yet. Be the first to share your thoughts!

Share your thought