Bhasaka
← Back to home

ಬಿಡು ಬಿಡು ಇನ್ನು ಸೋಗಾಚಾರ

Author: ವಿಜಯದಾಸCategory: ಶ್ರೀಕೃಷ್ಣ
ಬಿಡು ಬಿಡು ಇನ್ನು ಸೋಗಾಚಾರ | ಒಡಿಯ ಬಲ್ಲನು ನಾನು ನಿನ್ನ ವಿಚಾರ ತುಡಗತನ ಕಲಿತು ನೆರೆಹೊರೆಯವರ ಮನೆಯಲ್ಲಿ | ಗಡಿಗೆ ತುಪ್ಪಾ ಬೆಣ್ಣೆ ಮೊಸರು | ಹಾಲು | ಕುಡಿದು ಛೀ ಹಳಿ ಕದ್ದ ಕಳ್ಳನೆನೆಸಿಕೊಂಡ | ಪಡಚುತನವಲ್ಲದೆ ಭಾರಕನು ನೀನಲ್ಲ ||1|| ಸೀರಯನು ಕದ್ದಂದು ಕಡವಿನ ಮರವನೇರಿ | ಊರ ನಾರಿಯರ ಮಾನಕ್ಕೆ ಸೋತು || ಜಾರತನದವನಾಗಿ ತಿರಗಿ ಜಗದಾ ಭಂಡ | ಪೋರರಿಗೆ ಪೋರನಲ್ಲದೆ ಹಿರಿಯನಲ್ಲ||2|| ಮುನಿಗಳೆಜ್ಞದಲ್ಲಿ ತಿರಿತಂದು ಗೊಲ್ಲತೆರ | ತನುಜರ ಸಂಗಡಲಿದ್ದು ಎಂಜಲುಂಡು | ಮನುಜದೇಹವ ತೆತ್ತು ಬಿನಗು ಲೀಲಾಕೃತಿ | ದನಗಾವಿ ಎಲ್ಲದೆ ದೊರೆ ಮಗನು ನೀನಲ್ಲ ||3|| ಯಾತಕ್ಕೆ ಬಾರದ ಕುನಪೆಣ್ಣಿಗೆ ಮೆಚ್ಚಿ | ಮಾತುಳನ ಕೊಂದು ಮುತ್ತೈಯಗೊಲಿದು | ಭೀತಿಯಲಿ ಪರರಾಯನ ಮಗಳ ಕೊಂಡು ಬಂದ | ಯಾತರ ಪೌರುಷದವನು ಲೋಕದೊಳಗೆಲ್ಲ ||4|| ತೊತ್ತಿನ ಮಗನಲ್ಲಿ ವುಂಡು ಬಿಗಿಸಿಕೊಂಡು | ಮಿತ್ರಭೇದವನಿಕ್ಕಿ ಬಂಧುಗಳಿಗೆ | ತೆತ್ತಿಗನು ನೀನಾಗಿ ವಾಜಿಗಳ ಪಿಡಿದು | ಹತ್ಯವ ಮಾಡಿಸಿದೆ ಉತ್ತಮನು ನೀನಲ್ಲ ||5|| ಅಣ್ಣ ತಮ್ಮಂದಿರನು ಅಗಲಿಸಿ ವೈರದಲಿ | ನುಣ್ಣಗೆ ಒಬ್ಬರೊಬ್ಬರ ಕೊಲ್ಲಿಸಿ | ಇನ್ನೇನು ಉಸರುವೆನು ಕಟ್ಟಕಡಿಗೆ ಎಲ್ಲ | ನಿನ್ನ ಕುಲವನು ಕೊಂದೆ ಇದು ಪುಶಿಯಲ್ಲ ||6|| ತಿಳಿಯಲಾರರು ನಿನ್ನ ಠಕ್ಕು ಠವಳಿಯ ಮಾಯ | ಜಲಜ ಸಂಭವ ಶಿವ ಇಂದ್ರಾದ್ಯರು | ಸುಲಭ ದೇವರದೇವ ವಿಜಯವಿಠ್ಠಲರೇಯ ವೊಲಿದ ದಾಸರಿಗೆ ಸಂತಾನ ಕುಲದೀಪ||7||

Thoughts & Reflections

0

No reflections shared yet. Be the first to share your thoughts!

Share your thought