Bhasaka
← Back to home

ಭಕುತಿಯ ಪಾಲಿಸು ಜೀಯಾ

Author: ವಿಜಯದಾಸCategory: ಶ್ರೀಕೃಷ್ಣ
ಭಕುತಿಯ ಪಾಲಿಸು ಜೀಯಾ ಮುಂದೆ ಮುಕುತಿಗೊಡವೆ ಯಾಕೆ ನೀನೊಲಿದ ಮೇಲೆ ತನುವೆ ನಿನ್ನಾಧೀನವೆನಿಸು ಇದು ಅನುದಿನ ಕೊಡು ಏಕಪ್ರಕಾರ ಮನಸು ಧನ ವಡವೆಯ ಕಂಡ ಕನಸು ಎಂದು ಎನಗೆ ತೋರಲಿ ನಿತ್ಯ ನಿನ್ನಂಘ್ರಿ ನೆನಸು ||1|| ತತ್ವದ ಮತದೊಳಗಿರುಸು ಪುಶಿ ಉತ್ತರ ಮತವೆಂಬ ಮಾರ್ಗವ ಮೆರೆಸು ಉತ್ತಮರೊಳಗೆನ್ನನಿರಿಸು ಭವ ವತ್ತುವ ನಿನ್ನ ನಾಮಮೃತ ಸುರಿಸು ||2|| ಶ್ರವಣ ಮನನ ಧ್ಯಾನವೀಯೋ ಎನ್ನ ಅವಗುಣವೆಣಿಸದೆ ಕರುಣಾಳು ಕಾಯೊ ಅವಸಾನದಲಿ ನೀನೆ ಗತಿಯೊ ತ್ರೈ ಭುವನೇಶ ವಿಜಯವಿಠ್ಠಲ ನೀ ದೊರೆಯೋ ||3||

Thoughts & Reflections

0

No reflections shared yet. Be the first to share your thoughts!

Share your thought