Bhasaka
← Back to home

ಭಕ್ತರನ ನಂಬದಿರು ಭವದೂರನೆ

Author: ವಿಜಯದಾಸCategory: ಶ್ರೀಕೃಷ್ಣ
ಭಕ್ತರನ ನಂಬದಿರು ಭವದೂರನೆ ಮುಕ್ತಿಯನು ಬೇಡದಲೆ ನಿನ್ನೆ ಪೂಜಿಸುವರು ||ಪ|| ಪ್ರಸ್ತ ಮಾಡುವ ಸಾಧನಕ್ಕೆ ಪೋಗಿ ನಿಂದು ಬಲು ಹಸ್ತು ಬಂದವನು ತುತ್ತನ್ನ ಕೇಳೆ ಸ್ವಸ್ತವಾಗಿ ಕುಳಿತು ಭೋಜನ ಮಾಳ್ಪ ಆ ಗ್ರಹಸ್ತ ಪೊಟ್ಟಿ ತುಂಬದೆ ಬರಿದೆ ಏಳುವನೆ||1|| ಹಾದಿಕಾರನು ಬಂದು ವಸ್ತಿ ಮಾಡುವದಕ್ಕೆ ಆದರದಲಿ ಸ್ವಲ್ಪ ಸ್ಥಳವ ಕೇಳಿ ಪಾದ ಇಡುವನಿತರೊಳು ಕುಳಿತು ಆಮೇಲೆ ಸಂ ಪಾದಿಸುವ ತನ್ನ ತಕ್ಕಷ್ಟು ಧರಣಿಯನ್ನು||2|| ಆವದೊಲ್ಲೆವೆಂದು ಆಡುವರು ನಿತ್ಯದಲಿ ಕಾವ ಕರುಣಿ ನೀನೆಂದು ತಿಳಿದು ಶ್ರೀ ವನಿತೆಯರಸ ಸಿರಿ ವಿಜಯವಿಠ್ಠಲ ನಿನ್ನ ಪಾವನನಾಗಿದ್ದ ನಾಮ ಬದಲಿ ಇಂದು ||3||

Thoughts & Reflections

0

No reflections shared yet. Be the first to share your thoughts!

Share your thought