Bhasaka
← Back to home

ಭಕ್ತಿಯಲಿ ನಡೆವರಿವರೇ ಸುಗುಣರೊ

Author: ವಿಜಯದಾಸCategory: ಶ್ರೀಕೃಷ್ಣ
ಭಕ್ತಿಯಲಿ ನಡೆವರಿವರೇ ಸುಗುಣರೊ ಮುಕ್ತಿಯನು ಬಯಸಿ ಮುರಾರಾತಿಯ ಚರಣದಲ್ಲಿ ಉದಯದಲೆದ್ದು ಉನ್ನತ ಸ್ವರದಿಂದ ಹರಿ ಪದವೇ ಗತಿ ಎನುತಾ ಎಲ್ಲ ಕಾಲಕೆ ಉದರ ಚಿಂತಿಯ ಮರೆದು ಮನ ಉಬ್ಬಿ ಉತ್ಸವದಿ ಪದೋಪದಿಗೆ ಮಂಗಳಾವಾರ್ತಿ ಪೇಳುತ ನಿತ್ಯಾ ||1|| ಅಡಿಬಿಡದೆ ಭಾಗವತ ಮಿಕ್ಕ ಪುರಾಣಾದಿ ನುಡಿಗೆ ಕಿವಿಗೊಟ್ಟು ಹಾಹಾ ಎನತಲಿ ಒಡನೊಡನೆ ಹರಿ ಮಹಿಮೆಯಲಿ ಇದ್ದು ಮಾರಿಗಳ ಅಡಿಮಾಡಿ ಆದ್ಯಂತಕಾಲ ಸುಖಿಸುವ ನಿತ್ಯಾ ||2|| ಈ ದೇಹ ತ್ಯಾಗ ಮಾಡದೆ ಆಗಲಿ ಪಂಚ ಭೇದ ಪೇಳುವದು ಬಿಡೆನೆಂಬೊ ಸೊಲ್ಲು ಆದಿತ್ಯ ಲೋಕಕ್ಕೆ ಮುಟ್ಟುವಂತೆ ಕೂಗಿ ಸಾಧನ ಮಾಡುತಲಿಪ್ಪ ಶುಭಮಾರ್ಗದಲಿ ನಿತ್ಯಾ ||3|| ಅವಾವ ಮೋಹಕವು ಶಾಸ್ತ್ರದಲ್ಲಿದ್ದರೂ ಭಾವದಲಿ ಗುಣಿಸದೆ ನಿಕ್ಕರಿಸೀ ದೇವದೇವೇಶನೆ ಬ್ರಹ್ಮಾದಿಗಳು ವಂಚಿಪ ಕಾವ ಕೊಲ್ಲುವನೀತನೆಂದು ತಿಳಿದು ನಿತ್ಯಾ ||4|| ಅನ್ಯಶಬ್ದವು ಅನ್ಯಸ್ಪರಿಶ ರೂಪಕ ರಸಾ ಅನ್ಯಗಂಧಗಳಿಗೆ ಇಂಬುಗೊಡದೇ ಧನ್ಯರಾಗಿದ್ದವರ ಕರುಣ ಸಂಪಾದಿಸಿ ಪುಣ್ಯಭೂಮಿಯನು ಹಾರೈಸುವ ನಿತ್ಯಾ ||5|| ಅವೈಷ್ಣವನು ಹರಿ ಎಂದು ನುಡಿವಡೆ ತಾನು ಅವನಂತೆ ಸ್ಮರಿಸದೇ ಸುಮ್ಮನಿದ್ದೂ ಭವವದ್ದು ಭಾಗ್ಯವನು ಅಪೇಕ್ಷಿಸದೇ ಮುಂದೆ ಜವನ ದೂತರಿಗೆ ಮಹ ಭೀತಿ ತೋರುತ ನಿತ್ಯ ||6|| ಭೂಸುರರ ಪಾದದಲಿ ವಿಶ್ವಾಸ ಇಟ್ಟು ದು ರಾಶೆಯನು ಮಾಡಿ ನರರಾಶ್ರೈಸದೆ ಏಸೇಸು ವಿಪತ್ತು ಗುಣ ಮೇಲಟ್ಟಿದರು ಲೇಶವಾದರು ಧೈರ್ಯಗೆಡದೆ ಮತಿಯಲಿ ನಿತ್ಯ ||7|| ಕಾಲ ಮೃತ್ಯು ಬಂದು ಹುಂಕರಿಸಿ ನಿಂದು ಮಹ ಜ್ವಾಲೆಯನು ತೋರಿ ಕಠಿಣೋಕ್ತಿಯಲ್ಲೀ ಏಳೇಳು ಎನುತ ಎಬ್ಬಿಸಿದ ಕಾಲಕೆ ತನ್ನ ನಾಲಿಗೆಲಿ ಹರಿ ಕೃಷ್ಣ ಕೇಶವನೆನುತ ನಿತ್ಯಾ ||8|| ಸಕಲ ಚೇಷ್ಟಾದಿಗಳು ಹರಿಮಾಡಿಸಲು ಉಂಟು ಮುಕುತಿ ನರಕವೆಂಬ ಯೋಚನ್ಯಾಕೆ ಭಕುತವತ್ಸಲ ಸಿರಿ ವಿಠ್ಠಲನಲ್ಲಿ ಸುಖ ದು:ಖವಿತ್ತದು ಸಮ್ಮತವೆನುತ ನಿತ್ಯಾ ||9||

Thoughts & Reflections

0

No reflections shared yet. Be the first to share your thoughts!

Share your thought