Bhasaka
← Back to home

ನೀನ್ಯಾಕೋ ನಿನ್ನ

Author: ಪುರಂದರದಾಸCategory: ಶ್ರೀಕೃಷ್ಣRaaga: ಜೋನ್‌ಪುರೀTaala: ತ್ರಿತಾಲ
ನೀನ್ಯಾಕೋ ನಿನ್ನ ಹಂಗ್ಯಾಕೋ ರಂಗ ನಿನ್ನ ನಾಮದ ಬಲವೊಂದಿದ್ದರೆ ಸಾಕೋ || ಆ ಮರ ಈ ಮರ ಧ್ಯಾನಿಸುತ್ತಿರುವಾಗ ರಾಮ ರಾಮ ಎಂಬೋ ನಾಮವೆ ಕಾಯ್ತೋ || ಯಮನ ದೂತರು ಬಂದು ಅಜಮಿಳವೆಳೆವಾಗ ನಾರಾಯಣ ಎಂಬೋ ನಾಮವೆ ಕಾಯ್ತೋ || ಕರಿ ಮಕರಗೆ ಸಿಲುಕಿ ಮೊರೆಯಿಡುತಿರುವಾಗ ಆದಿಮೂಲ ಎಂಬೋ ನಾಮವೆ ಕಾಯ್ತೋ || ಪ್ರಹ್ಲಾದನ ಪಿತ ಬಾಧಿಸುತಿರುವಾಗ ನಾರಸಿಂಹ ಎಂಬೋ ನಾಮವೆ ಕಾಯ್ತೋ || ಬಾಲೆಯ ಸಭೆಯಲಿ ಸೀರೆಯ ಸೆಳೆವಾಗ ಕೃಷ್ಣ ಕೃಷ್ಣ ಎಂಬೋ ನಾಮವೆ ಕಾಯ್ತೋ || ನಿನ್ನ ನಾಮಕೆ ಸರಿ ಕಾಣೆನೋ ಜಗದಲಿ ಘನ್ನ ಮಹಿಮ ಶ್ರೀ ಪುರಂದರ ವಿಟ್ಠಲ ||

Thoughts & Reflections

0

No reflections shared yet. Be the first to share your thoughts!

Share your thought