Bhasaka
← Back to home

ಮಧ್ವ ಸರೋವರದ ಸ್ನಾನವ ಮಾಡಿರೊ

Author: ವಿಜಯದಾಸCategory: ಶ್ರೀಮಧ್ವಾಚಾರ್ಯ
ಮಧ್ವ ಸರೋವರದ ಸ್ನಾನವ ಮಾಡಿರೊ ಬುದ್ಧಿವಂತರು ಕೇಳಿ ಇದರ ಮಹಾತ್ಮೆಯನು ಕೃತಯುಗದಲಿ ಇದೇ ಅನಂತ ಸರೋವರ ತ್ರೇತಾಯುಗದಲ್ಲಿ ವರುಣತೀರ್ಥ ಕ್ಷಿತಿಯೊಳಗೆ ದ್ವಾಪರದಿ ಚಂದ್ರ ಪುಷ್ಕರಣಿ ಉ- ನ್ನತ ಕಲಿಯುಗದಲ್ಲಿ ಮಹಾ ತೀರಿಥ ||1|| ಸುರನದೀ ಮಿಕ್ಕಾದ ಸ್ಥಾನದಲಿ ಸೇವೆ ವಿ- ಸ್ತರವಾಗಿ ಕೊಳುತಿಪ್ಪಳು ಉಪೇಕ್ಷದಿ ಧರೆಯೊಳಗೆ ಇಲ್ಲಿ ಗುರು ಮಧ್ವಮುನಿ ಸರ್ವಾರ್ಥ ನಿರುತದಲ್ಲಿ ತೀವ್ರಗತಿ ಕೊಡುವಳೂ||2||| ಸಕಲ ವೇದಶಾಸ್ತ್ರ ಓದಿದವನಾದರೂ ಶಕುತಿವಂತನಾಗಿ ಇದ್ದನಾಗೆ ಸುಖ ತೀರ್ಥ ಸರೋವರದ ಸ್ನಾನ ಮಾಡದಿರಲು ಶಕಲ ಮತಿಯಲಿ ಮಹಾನರಕ ಭುಂಜಿಸುವಾ ||3|| ಒಂದೆ ಮಜ್ಜನ ಮಾಡೆ ಅನಂತ ಜನುಮಕೆ ತಂದು ಕೊಡುವದು ನರಗೆ ಮಿಂದ ಫಲವೊ ಎಂದೆಂದಿಗೆ ಇಲ್ಲಿ ಬಿಡದೆ ವಾಸವಾದ ಮಂದಿಗಳ ಪುಣ್ಯ ಪ್ರತಾಪ ಎಣಿಸುವರಾರು ||4|| ಆದಿಯಲ್ಲಿ ಇದ್ದ ಲಿಂಗ ಶರೀರವು ಛೇದಿಸುವದಕೆ ಇದೇ ಸ್ನಾನವೆನ್ನಿ ಮೋದ ಮೂರುತಿ ನಮ್ಮ ವಿಜಯವಿಠ್ಠಲ ಕೃಷ್ಣ ಭೇದಾರ್ಥ ಮತಿಕೊಟ್ಟ ಭೇದವನು ತೊಲಗಿಸುವಾ||5||

Thoughts & Reflections

0

No reflections shared yet. Be the first to share your thoughts!

Share your thought