Bhasaka
← Back to home

ಮಧ್ವಮತ ಪೊಂದದೆ ಬದುಕಿದವನೂ

Author: ವಿಜಯದಾಸCategory: ಶ್ರೀಮಧ್ವಾಚಾರ್ಯ
ಮಧ್ವಮತ ಪೊಂದದೆ ಬದುಕಿದವನೂ ಹದ್ದು ಕಾಗಿ ಬದುಕಿ ಕಾಲವನು ಕಳೆದಂತೆ ಸಕಲೇಂದ್ರಿಯಗಳು ಇದ್ದು ನಯನೇಂದ್ರಿಯ ಇಲ್ಲದಂ ಫಲಪುಷ್ಪಯಿಲ್ಲದಾ ಗಿಡಬಳ್ಳಿ ಇದ್ದಂತೆ ಮಳೆಯಿಲ್ಲದಾ ಬೆಳಸು ನೋಡಿದಂತೆ ಚಲುವನಾದಡೆ ಏನು ಗುಣಹೀನನಾದಂತೆ ಖಳರು ನಿತ್ಯಾಕರ್ಮ ಚರಿಸಿದಂತೆ ||1|| ಉತ್ತಮರ ಕೂಡದಾ ಯಾತ್ರೆ ಮಾಡಿದಂತೆ ಕತ್ತೆ ಪರಿಮಳ ಪೊತ್ತು ತಿರುಗಿದಂತೆ ಮೃತ್ತಿಕೆ ಶೌಚ ಇಲ್ಲದೆ ಆಚಾರ ಮಾಡಿದಂತೆ ಸತ್ತ ಹೆಣಕ್ಕೆ ವಸ್ತ್ರ ಶೃಂಗರಿಸಿದಂತೆ||2|| ನಿಶಿಕರ ಇಲ್ಲದಾ ತಾರೆಗಳು ಇದ್ದಂತೆ ವಸುಧಿಪತಿಯಿಲ್ಲದಾ ರಾಜ್ಯದಂತೆ ಹಸಿವೆ ಇಲ್ಲದವನು ಮಧುರನ್ನ ಉಂಡಂತೆ ಹಸುಗಳಿಲ್ಲದ ಮನೆ ವೊಪ್ಪಿದಂತೆ ||3|| ತಾರತಮ್ಯಗಳಿಲ್ಲದ ವೇದ ಓದಿದಂತೆ ಪುರಂದರದಾಸರು ಪೇಳಿದಂತೆ ಮಾರುತಿಯ ಮತವಿಡಿದು ಸಿರಿ ವಿಜಯವಿಠ್ಠಲನ ಕಾರುಣ್ಯ ಪಡಿಯದವ ಅಧಮನಂತೆ ||4||

Thoughts & Reflections

0

No reflections shared yet. Be the first to share your thoughts!

Share your thought