Bhasaka
← Back to home

ಮಧ್ವಮತವ ಪೊಂದದವನ ಭಕುತಿಯಾತಕೆ

Author: ವಿಜಯದಾಸCategory: ಶ್ರೀಮಧ್ವಾಚಾರ್ಯ
ಮಧ್ವಮತವ ಪೊಂದದವನ ಭಕುತಿಯಾತಕೆ ಊಧ್ರ್ವಪುಂಡ್ರ ತಿದ್ದದವನ ಕರ್ಮವ್ಯಾತಕೆ ದಾನವನ್ನು ಮಾಡದವನ ದ್ರವ್ಯವ್ಯಾತಕೆ | ಸ್ನಾನವನ್ನು ಮಾಡದವನ ಮೌನವ್ಯಾತಕೆ | ಮಾನಿನಿಯು ಇಲ್ಲದವನ ಬದುಕು ಯಾತಕೆ | ಧ್ಯಾನವನ್ನು ಅರಿಯದವನ ಪೂಜೆ ಯಾತಕೆ ||1|| ವಂಶವನ್ನುದ್ಧರಿಸದಂಥ ಮಗನು ಯಾತಕೆ | ಹಿಂಸೆಯನ್ನು ಪಡಿಸುವಂಥ ಅರಸು ಯಾತಕೆ || ಸಂಸಾರವನು ಒಲ್ಲದಂಥ ಸತಿಯು ಯಾತಕೆ | ಕಂಸಾರಿಯನು ತಿಳಿಯದಂಥ ಜ್ಞಾನವ್ಯಾತಕೆ ||2|| ಬಂಧು ಬಳಗ ಬಿಟ್ಟು ಉಂಬ ನೆಂಟರ್ಯಾತಕೆ | ಕಂದರನ್ನು ಮಾರುತಿಪ್ಪ ತಂದೆಯಾತಕೆ || ಬಂದ ಅತಿಥಿಗನ್ನವಿಕ್ಕದ ಸದನವ್ಯಾತಕೆ | ನಿಂದೆಗಳು ಮಾಡುತಿಹನಾಚಾರವ್ಯಾತಕೆ ||3|| ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆ | ಹಿರಿಯರನ್ನು ಸಾಕದವನ ಪುಣ್ಯವ್ಯಾತಕೆ || ಚರಿಸಿ ತೀರ್ಥಯಾತ್ರೆ ಮಾಡದ ದೇಹವ್ಯಾತಕೆ | ವರ-ಪ್ರಸಾದವೀಯದಂಥ ದೇವರ್ಯಾತಕೆ||4|| ಏಕಾದಶಿಯ ಮಾಡದವನ ವ್ರತವು ಯಾತಕೆ | ಏಕಮನಸು ಇಲ್ಲದವನ ನಡತೆ ಯಾತಕೆ || ಸಾಕಿದವನ ಕೊಲ್ಲುವಂಥ ಭಂಟನ್ಯಾತಕೆ | ಲೋಕವಾರ್ತೆ ಬಿಡದವನ ಜಪವು ಯಾತಕೆ ||5|| ಭಾಷೆ ಬದ್ಧವಿಲ್ಲದವನ ಮಾತು ಯಾತಕೆ | ಕಾಸುವೀಸಕೆ ಬಡಿದಾಡುವ ಅನುಜರ್ಯಾತಕೆ || ಲೇಸು ಹೊಲ್ಲೆಹ ನೋಡದಂಥ ಗೆಳೆಯನ್ಯಾತಕೆ | ಆಸೆಯನ್ನು ಬಿಡದ ಸನ್ಯಾಸವ್ಯಾತಕೆ ||6|| ತಪ್ತ ಮುದ್ರೆಯಿಲ್ಲದವನ ಜನ್ಮವ್ಯಾತಕೆ | ಗುಪ್ತದಲ್ಲಿ ನಡೆಯದಿಪ್ಪ ದಾಸನ್ಯಾತಕೆ || ಆಪ್ತಬಂಧು ವಿಜಯವಿಠ್ಠಲನ ಶ್ರೀ ಚರಣದಿ | ಕ್ಲುಪ್ತ ಮೀರದೆ ನಡೆದ ಮೇಲೆ ನರಕವ್ಯಾತಕೆ ||7||

Thoughts & Reflections

0

No reflections shared yet. Be the first to share your thoughts!

Share your thought