Bhasaka
← Back to home

ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ

Author: ವಿಜಯದಾಸCategory: ಶ್ರೀಮಧ್ವಾಚಾರ್ಯ
ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ ||1|| ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ ||2|| ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅe್ಞÁನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು ||3|| ಪಂಚ ಭೇದವೆ ಸತ್ಯ ಐಕ್ಯವೆಂಬದು ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಮಿಂಚುವ ಹೇಮದ ಕಾಯ ಸುಖ ತೀರ್ಥರಾಯಾ||4|| ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ ||5||

Thoughts & Reflections

0

No reflections shared yet. Be the first to share your thoughts!

Share your thought