Bhasaka
← Back to home

ಮುನಿಯ ನೋಡಿರೊ ವಂದನಿಯ ಮಾಡಿರೊ

Author: ವಿಜಯದಾಸCategory: ಇತರೆ
ಮುನಿಯ ನೋಡಿರೊ ವಂದನಿಯ ಮಾಡಿರೊ ಕನಸಿನೊಳಗೆ ನೆನೆದ ವರವ ಕ್ಷಣದಲೀವ ಘನ ಸಮರ್ಥ ತೊಲಗದಿಪ್ಪ ಭೂತಪ್ರೇತ ನೆಲೆಯಾಗಿರಲು ಇವರ ಚರಣ ತೊಳೆದ ಜಲವು ಬೀಳಲಾಕ್ಷಣ ಹಲುಬಿಕೊಳುತಲಳಿದು ಪೋಗೋವು ||1|| ಹಿಂದೆ ವ್ಯಾಸ ಮುನಿಗಳಿಂದ ನೊಂದು ನಮಿತರಾಗಿ ಅವರಿಂದ ಭೇದವರಿತು ಗೋ ವಿಂದ ಒಡೆಯನೀತ ||2|| ಮೊದಲು ಹೇಮಕಶ್ಯಪಜನ ಬದಿಯಲಿದ್ದು ತತ್ವಜ್ಞಾನ ಮುದದಿ ತಿಳಿದು ಮಾಯಿ ಶಾಸ್ತ್ರ ವೊದೆದು ಕಳೆದ ನಿಜ ಸದಮಲ ಸಮರ್ಥ ||3|| ಮಧ್ವಮತಾಂಬುಧಿಯೊಳು ಪುಟ್ಟಿ ಅದ್ವೈತ ಮತವನೆಲ್ಲ ಸದದು ಸದ್ವೈಷ್ಣವರನ್ನ ಪಾಲಿಸಿ ಊಧ್ರ್ವ ಲೋಕದಲ್ಲಿ ಮೆರೆದ||4|| ವರಸತ್ಯಾಭಿನವತೀರ್ಥರ ಕರಕಂಜದಿಂದ ಜನಿಸಿ ವೇಲೂರ ಪುರಪಯೋನಿಧಿವಾಸ ಜಗದ ದೊರೆ ವಿಜಯವಿಠ್ಠಲನ್ನದಾಸ||5||

Thoughts & Reflections

0

No reflections shared yet. Be the first to share your thoughts!

Share your thought