Bhasaka
← Back to home

ಯಾಕೆ ಜೀವನವೆ ನೀ ಶ್ರೀಕಾಂತನನು

Author: ವಿಜಯದಾಸCategory: ಶ್ರೀಕೃಷ್ಣ
ಯಾಕೆ ಜೀವನವೆ ನೀ ಶ್ರೀಕಾಂತನನು ಮರೆವಿ | ವಿವೇಕವೇ ನಿನಗಿದು ? ಜೋಕೆಯಿಂದಲಿ ನಿನ್ನ ಸಾಕುವ ಶ್ರೀ ಹರಿಯು | ಬೇಕಾದ ವರವೀವ ಭಕ್ತವತ್ಸಲ ದೊರೆಯಾ ಲೇಸಾದರು ವಿಷಯದಾಸೆಯ ಬಿಡಲೊಲ್ಲಿ | ಏಸು ಜನ್ಮಂಗಳಾದರು ಈ ಶರೀರವು ನಿನ್ನದೆಂದು ತಿಳಿದು || ಪೋಷಿಸುವಿಯೊ ಬರಿದೆ ದೋಷರಹಿತ ಶ್ರೀನಿ- | ವಾಸನ್ನ ನೆನೆದು ನಿರ್ದೋಷವ ಕಳೆದೆನ್ನ ಪೋಷಿಸು ಎನ್ನದಲೆ ||1|| ಸತಿ-ಸುತರನು ನೀನು ಸಲಹುವೆನೆನುತಲಿ | ಅತಿ ಚಿಂತೆ ನಿನಗ್ಯಾತಕೊ ಗತಿ ನಿನಗಾಗುವ || ಹಿತಚಂತನೆ ಮಾಡೊ ಸದ್ಗತಿಯಾಗುವ ತನಕ | ರತಿಪತಿ ಪಿತನ ನೆನೆದು ನೀ ಪ್ರತಿಕ್ಷಣ ಹರಿಕಥೆ ಕೇಳದಲೆ||2|| ಪೊಟ್ಟೆಗೋಸುಗ ಭ್ರಷ್ಟರ ಸ್ತುತಿಸಿ ನೀ | ಕೆಟ್ಟು ಪೋಗುವಿ ಯಾತಕೋ ಜೀವನವೆ || ಪುಟ್ಟಿಸಿದವ ನಿನ್ನ ಪೊಟ್ಟೆಗೆ ಕೊಡನೇನೋ | ಕೆಟ್ಟುಹೋಗದೆ ವಿಜಯವಿಠ್ಠಲನ್ನ ನೆನೆದು ಸುಖಿಯಾಗು||3||

Thoughts & Reflections

0

No reflections shared yet. Be the first to share your thoughts!

Share your thought