Bhasaka
← Back to home

ಯಾಕೆ ಪುಟ್ಟಿಸಿದಿ ಇನ್ನು ಎಲೊ ಹರಿಯೆ

Author: ವಿಜಯದಾಸCategory: ಶ್ರೀಕೃಷ್ಣ
ಯಾಕೆ ಪುಟ್ಟಿಸಿದಿ ಇನ್ನು ಎಲೊ ಹರಿಯೆ | ಲೋಕ ದೊಳಗನುಗಾಲ ತಿರಿದು ತಿಂಬುವಂತೆ ಮಾಡಿ ಒಡಲಿಗಾಗಿ ಒಬ್ಬನ ಸಂಗಡ ಹೋಗಲು | ಕೊಡುವವನು ಇಲ್ಲೆಂದು ಪರಿಹರಿಸುವ || ಸುಡು ಈ ಶರೀರವ ಬಳಲಲಾರೆನೊ ವಿಷದ, ಮಡುವನಾದರು ಧುಮುಕಿ ಮರಣವಾಗುವೆ ರಂಗಾ ||1|| ಪ್ರತಿದಿನವೂ ಅನ್ನ ಕೊಡುವವನ ಬಾಗಿಲಿಗ್ಹೋಗೆ | ಹುತವಾಗುವನು ಎನ್ನ ನೋಡುತಲಿ || ಕ್ಷಿತಿಯೊಳಗೆ ಈ ಪರಿ ಬದುಕಿ ಇಹೋದಕಿಂತ | ಹತವಾಗಬಹುದಂಬಿನ ಮೊನೆಗೆ ಬಿದ್ದು ರಂಗಾ ||2|| ಎಲ್ಲಿ ಬೇಡಿದಲ್ಲವೆಂಬೋ ಸೊಲ್ಲಿಲ್ಲಿದೇ | ಒಲ್ಲೆನೋ ಸಾಕು ಈ ನರ ಜನ್ಮವು ಬಲ್ಲಿದ ಬಲ್ಲಿದರರಸ ಸಿರಿ ವಿಜಯವಿಠ್ಠಲ ನಿ- | ನ್ನಲ್ಲಿ ದೂತರ ಸಂಗದಲ್ಲಿ ಸುಖಬಡಿಸೊ ||3||

Thoughts & Reflections

0

No reflections shared yet. Be the first to share your thoughts!

Share your thought