Bhasaka
← Back to home

ಯಾಚಕರು ಪರರ ಸಂಕಟ ಬಲ್ಲರೆಣ

Author: ವಿಜಯದಾಸCategory: ಶ್ರೀಕೃಷ್ಣ
ಯಾಚಕರು ಪರರ ಸಂಕಟ ಬಲ್ಲರೆಣ ಭೂ ಚಕ್ರದಲಿ ಗಾಳಿಯಂತೆ ತಿರುಗಲು ಬಿಡರು ಕಾಪೀನವನು ಧರಿಸಿ ಮುಖವ ಡೊಂಕನೆ ಮಾಡಿ ಕೋಪದಿಂದಲಿ ಕರವನೆತ್ತಲ್ಯಾಕೆ ಪಾಪಿ ಕೂಪವ ಮೀರಿ ಸಮುದ್ರವನು ನೆರೆ ದಾಟಿ ರೂಪಾಂತರದಿ ಮನೆ ಮನೆಯ ಪೊಕ್ಕರು ಬಿಡರು ||1|| ವಿಷವ ಸವಿದುಂಡು ಮಹ ಮಡುವ ಪ್ರವೇಶಿಸಿ ವಸುಧೆಯೊಳು ಬೇಡಿ ಕಿರಿತಂದುಂಡರು ಬೆಸಬೆಸನೆ ವನವನವ ತಿರುಗಿ ಅe್ಞÁತದಲಿ ವಸಿಸಿ ಮಾನಸದಿ ಗೃಹಕರ್ಮ ಮಾಡಲಿ ಬಿಡರು ||2|| ಜುಟ್ಟು ಜನಿವಾರವನು ಕಿತ್ತುಕೊಂಡು ಯತಿಯಾಗಿ ಕಟ್ಟ ಕಡೆಯಲಿ ಗೃಹಸ್ಥ ಧರ್ಮ ತೊರೆದು ಹುಟ್ಟುಗತಿ ಯಿಲ್ಲೆನಗೆ ಕೃಷ್ಣ ಕೃಷ್ಣ ವಿಜಯ ವಿಠ್ಠಲನ ಪಾದಕೆ ಮೊರೆಯಿಟ್ಟರು ಬಿಡರು ||3||

Thoughts & Reflections

0

No reflections shared yet. Be the first to share your thoughts!

Share your thought