Bhasaka
← Back to home

ಯಾವದು ಸುಖವೇ ಮತ್ಯಾನಂದವೇ

Author: ವಿಜಯದಾಸCategory: ಶ್ರೀಕೃಷ್ಣ
ಯಾವದು ಸುಖವೇ ಮತ್ಯಾನಂದವೇ ಈ ಉಡುಪಿಯ ಯಾತ್ರೆ ಮಾಡಿದ ಮನುಜಗೆ ಮನದಲಪೇಕ್ಷಿಸೆ ಅವನಿಗೆ ಹದಿನಾಲ್ಕು ಮನುಗಳು ಭೂಮಿಯನಾಳೋತನಕ ಕನಕನ ಚಿತ್ತನಾಗಿ ಗೋಕುಲದಿಂದ ಸ ಜ್ಜನ ಮಾರ್ಗದಲಿ ಗುಣವಂತನೆನಿಸಿಕೊಂಬ ||1|| ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ ಅಂದೆ ಸುರರೊಳು ಗಣನೆ ಎನ್ನೆ ಒಂದಕ್ಕೆ ನೂರಾರು ಯಾಗ ಮಾಡಿದ ಫಲ ತಂದು ಕೊಡುವ ಅಜನಾದಿಕಲ್ಪ ಪರಿಯಂತ||2|| ಅರ್ಧ ಮಾರ್ಗದಿ ಬರಲು ಬಂದು ನಿಲ್ಲಲು ಅವರ ಸಾಗರದಿ ಕೋಟಿ ಸ್ನಾನ ಮಾಡಲು ಊಧ್ವರೇತಸ್ಥನಾಗಿರ್ದ ಫಲವಕ್ಕೆ ಊಧ್ರ್ವಭೂಷಿತನಾದ ಬ್ರಹ್ಮಯುಗ ಪರಿಯಂತ ||3|| ಸನ್ನಿಧಿಗೆ ಬಂದು ಕರವನ್ನೆ ಜೋಡಿಸಿ ಸನ್ನುತ ಸಾಧನವನು ಮಾಡಲು ಸನ್ನುತರ ತೆಗೆದು ಜ್ಞಾನ ಭಕುತಿ ಸಂ ಪನ್ನವಿರಕುತಿಗೆ ಯತಿಗಾದಿ ಮುಖನಾದ||4|| ಶ್ರೀಕೃಷ್ಣ ಕೃಷ್ಣೆಂದು ಕರವ ಜೋಡಿಸಿ ನಿಂದು ದೃಷ್ಟಿಯಿಂದಲಿ ನೋಡಿದವನೆ ಮುಕ್ತಾ ಮುಟ್ಟಿ ಭಜಿಸುವರ ಸತ್ಪುಣ್ಯ ವಿಜಯವಿಠ್ಠಲನಾತನೆ ಬಲ್ಲ ಅರುಹಲಳವಲ್ಲ ||5||

Thoughts & Reflections

0

No reflections shared yet. Be the first to share your thoughts!

Share your thought