Bhasaka
← Back to home

ರಾಮ ರಾಮ ಎಂಬೆರಡಕ್ಷರ

Author: ವಿಜಯದಾಸCategory: ಶ್ರೀರಾಮ
ರಾಮ ರಾಮ ಎಂಬೆರಡಕ್ಷರ | ಪ್ರೇಮದಿ ಸಲುಹಿತು ಸುಜನರನು ಹಾಲಾಹಲವನು ಪಾನವಮಾಡಿದ | ಫಾಲಲೋಚನನೆ ಬಲ್ಲವನು || ಆಲಾಪಿಸುತ್ತ ಶಿಲೆಯಾಗಿದ್ದ | ಬಾಲೆ ಅಹಲ್ಯೆಯ ಕೇಳೇನು ||1|| ಅಂಜಿಕೆಯಿಲ್ಲದೆ ಗಿರಿಸಾರಿದ ಕಪಿ-| ಕುಂಜರ ರಮಿಸುತ ಬಲ್ಲವನು || ಎಂಜಲ ಫಲಗಳ ಹರಿಗರ್ಪಿಸಿದ | ಕಂಜಲೋಚನೆಯ ಕೇಳೇನು ||2|| ಕಾಲವರಿತು ಸೇವೆಯ ಮಾಡಿದ ಲೋಲ ಲಕ್ಷ್ಮಣನೆ ಬಲ್ಲವನು || ವ್ಯಾಳಶಯನ ಶ್ರೀ ವಿಜಯವಿಠ್ಠಲನ ಲೀಲೆ ಶರಧಿಯ ಕೇಳೇನು||3||

Thoughts & Reflections

0

No reflections shared yet. Be the first to share your thoughts!

Share your thought