Bhasaka
← Back to home

ವೆಂಕಟೇಶನೆ ಬಲ್ಲ ಪರಮ ಪಾತಕೀಯಾ

Author: ವಿಜಯದಾಸCategory: ಶ್ರೀಕೃಷ್ಣ
ವೆಂಕಟೇಶನೆ ಬಲ್ಲ ಪರಮ ಪಾತಕೀಯಾ | ಕಿನ್ನೇಶ ಮುನಿದು ಬಂದೇನು ಮಾಡುವನು ಚಿತ್ತದೊಲ್ಲಭನ ಸಮ್ಮತದಲ್ಲಿ ನಾರಿಯು | ಅತ್ತವಿತ್ತ ಊರು ಸುತ್ತುತಿರಲು | ಸುತ್ತಯಿದ್ದ ಬಂಧು ಬಳಗದವರು ಕೂಡಿ | ಮುತ್ತಿಕೊಂಡು ಅವಳನೇನು ಮಾಡುವರು ||1|| ಕದ್ದು ತಂದಾ ಒಡವೆ ರಾಜ್ಯವಾಳುವನಿಗೆ ತಿದ್ದುವಾ ಸರಿಪಾಲು ಲಂಚಕೊಟ್ಟು | ಇದ್ದವನು ಹಗಲಿರಳು ಕದ್ದರೆ ಆ ಊರು | ಎದ್ದು ಹಿಡಿದವರೆಲ್ಲ ಏನು ಮಾಡುವರು||2|| ತೊತ್ತಿನ ಮೇಲೆ ಒಡೆಯನ ದಯವಿರೆ | ತೊತ್ತು ಗರ್ತಿಗೆ ಅಂಜಿ ನಡಕೊಂಬಳೆ | ಕರ್ತು ಶ್ರೀ ವಿಜಯವಿಠ್ಠಲ ವೆಂಕಟೇಶನ | ಚಿತ್ತದಿ ನೀನಿರೆಯನೆವುಂಟೆ||3||

Thoughts & Reflections

0

No reflections shared yet. Be the first to share your thoughts!

Share your thought