Bhasaka
← Back to home

ವೇಣು ಗೋಪಾಲವಿಠ್ಠಲರೇಯ

Author: ವಿಜಯದಾಸCategory: ಶ್ರೀಕೃಷ್ಣ
ವೇಣು ಗೋಪಾಲವಿಠ್ಠಲರೇಯ ನಿನ್ನ ಪದ ರೇಣು ನಂಬಿದ ಮಾನವ ಏನು ಅರಿಯದಲಿಪ್ಪ ನೀನೊಲಿದು ಕರುಣದಲಿ e್ಞÁನ ಭಕುತಿಯ ಕೊಡುವುದು ಸ್ವಾಮಿ ಪರದೈವ ನೀನೆಂದು ಮೂಢಮತಿಯಾದವನು | ಪರಿಪೂರ್ಣವಾಗಿ ನಿರುತ | ನೆರೆ ನಂಬಿದೆನು ನಾನಾ ಪ್ರಕಾರದಲಿ ಸ್ಮರಣೆ ಮಾಡುತ ಮನದಲಿ | ತರತಮ್ಯ ಭಾವದಲಿ ಮಾರ್ಗವನೆ ತೋರಿ ವಿ ಸ್ತರ ಮಾಡು ಇವನ ಕೀರ್ತಿ ಕರುಣಾಕರನೆ ನಿನ್ನ ಮೊರೆಹೊಕ್ಕ ಶರಣನ್ನ ಕರಪಿಡಿದು ಪಾಲಿಸುವುದು ಸ್ವಾಮಿ||1|| ಲೌಕಿಕವೆಲ್ಲಿನಗೆ ವೈದಿಕವೆಂದೆನಿಸಿ ಸಾಕುವುದು ಸಾಕಾರನೆ ನೂಕು ದುರಳದಿಂದ ಬಂದ ವಿಪತ್ತುಗಳ ತಾಕಗೊಡದಂತೆ ವೇಗ ಬೇಕು ಬೇಕೆಂದೆನುತ ಪೊಗಳುವವನಿಗೆ ಶುಭ | ವಾಕು ನೇಮಿಪುದು ಸತತ ನಾಕಜನ ಬಲವಾಗಿ ರಕ್ಷಿಸಲಿ ಸುರತರುವೆ ಶ್ರೀ ಕಾಂತ ನಿನ್ನಿಂದಲಿ ಸ್ವಾಮಿ ||2|| ಓರ್ವನ ಪೆಸರುಗೊಂಡು ಪೇಳಲೇತಕೆ ಇನ್ನು | ಸರ್ವರನು ಈ ವಿಧದಲಿ | ಊರ್ವಿಯೊಳಗೆ ಇಟ್ಟು ಉದ್ಧರಿಸಿ ಉರುಕಾಲ ನಿವ್ರ್ಯಾಜದವನ ಮಾಡಿ ಸರ್ವರಗೋಸುಗ ತುತಿಸುತಲಿ ಯೋಗ್ಯರಿಗೆ ಸರ್ವದಾ ಕೃಪೆಮಾಡು ಎಂಬೆ ಸರ್ವರಾಧಾರ ಸಿರಿ ವಿಜಯವಿಠ್ಠಲ ನಿನ್ನ ಶರ್ವ ತುತಿಸಿ ಕಾಣ ನಾನೊಬ್ಬ ಪೊಗಳುವನೆ ||3||

Thoughts & Reflections

0

No reflections shared yet. Be the first to share your thoughts!

Share your thought