Bhasaka
← Back to home

ಶೋಭಾನ ಶೋಭಾನವೆನ್ನಿರೆ ಸುರರಂಗನಿಯರೆಲ್ಲ

Author: ವಿಜಯದಾಸCategory: ಶ್ರೀಕೃಷ್ಣ
ಶೋಭಾನ | ಶೋಭಾನವೆನ್ನಿರೆ ಸುರರಂಗನಿಯರೆಲ್ಲ ಶೋಭಾನವೆನ್ನಿ ಶುಭವೆನ್ನಿ ಪ ಮಂಗಳದೇವಿಯ ರಮಣ ಬಾ | ಶೃಂಗಾರದ ಗುಣನಿಧಿಯೆ ಬಾ | ಅಂಗಜಜನಕ ಅರವಿಂದದಾಳಾಕ್ಷನೆ ರಂಗಾ ಬಾ || ಭವಭವ ಭಂಗಾ ಬಾ | ದೇವೋತ್ತುಂಗಾ ಬಾ | ಜಗದಂತರಂಗಾ ಬಾ ಹಸೆಯ ಜಗುಲಿಗೆ||1|| ಸಂಕುರುಷಣ ಅನಿರುದ್ಧಾ ಬಾ | ಪಂಕಜ ಸಂಭವನಯ್ಯ ಬಾ | ಕುಂಕುಮಾಂಕಿತನೆ ಭಕುತ ಕುಮುದ ಮೃಗಾಂಕ ಬಾ || ನಿಷ್ಕಳಂಕಾ ಬಾ ಶಂಖಚಕ್ರಾಂಕ ಬಾ | ಅಹಿಪರಿಯಂಕ ಬಾ ಹಸೆಯ ಜಗುಲಿಗೆ ||2|| ಹೇಮಾಂಬರಧರ ಹರಿಯೇ ಬಾ | ಸಾಮಜರಾಜಾ ವರದಾ ಬಾ | ಸಾಮವಿಲೋಲನೆ ಸದ್ಗುಣ ಶೀಲನೆ ರಾಮಾ ಬಾ || ಸುರಸಾರ್ವಭೌಮಾ ಬಾ ದೈತ್ಯವಿರಾಮಾ ಬಾ | ರಣರಂಗಭೀಮಾ ಬಾ ಹಸೆಯಾ ಜಗುಲಿಗೆ ||3|| ಅನಂತ ಅವತಾರ ಅಚ್ಯುತ ಬಾ | ಉನ್ನತ ಮಹಿಮನೆ ಯಾದವ ಬಾ | ಘನ್ನ ಮೂರುತಿಯೆ ಸುಪ್ರಸನ್ನಾ ಬಾ ಸಚ್ಚರಿತಾ ಬಾ | ಭಾಗ್ಯ ಸಂಪನ್ನಾ ಬಾ ಜೀವರ ಭಿನ್ನಾ ಬಾ ಹಸೆಯಾ ಜಗುಲಿಗೆ ||4|| ನಾರಾಯಣ ದಶರೂಪಾ ಬಾ | ಚಾರುಚರಿತಾ ಪ್ರತಾಪ ಬಾ | ಶೌರಿ ಮುರಾರಿಯೆ ನಿಟಿಲ ಕಸ್ತೂರಿಯ ಲೇಪಾ ಬಾ || ಯದುಕುಲ ದೀಪಾ ಬಾ ನಿತ್ಯ ಸಲ್ಲಾಪಾ ಬಾ ನಮ್ಮ ಸಮೀಪ ಬಾ ಹಸೆಯಾ ಜಗುಲಿಗೆ ||5|| ವಾಸುದೇವ ಮುಕುಂದಾ ಬಾ | ಸಾಸಿರನಾಮ ಗೋವಿಂದಾ ಬಾ | ಕೇಶವ ಪುರುಷೋತ್ತಮ ನರಸಿಂಹ ಉಪೇಂದ್ರ ಬಾ || ಗೋಪಿಕಂದಾ ಬಾ | ಬಹುಬಲ ವೃಂದಾ ಬಾ | ಅತಿಜವದಿಂದಾ ಬಾ ಹಸೆಯಾ ಜಗುಲಿಗೆ ||6|| ಪರತತ್ವದಿ ಅತಿ ಚಿಂತಾ ಬಾ | ಪರಬೊಮ್ಮನೆ ಅತಿ ಶಾಂತಾ ಬಾ | ಪರಮಾತ್ಮನೆ ಪರಿಪೂರ್ಣ ವಿಭೂತಿವಂತಾ ಬಾ || ಅಖಿಳ ವೇದಾಂತಾ ಬಾ | ರುಕ್ಮಿಣಿಕಾಂತಾ ಬಾ | ಸದ್ಗುಣವಂತಾ ಬಾ ಹಸೆಯಾ ಜಗುಲಿಗೆ||7|| ಉದಯ ಪ್ರಭಾಕರ ಭಾಸಾ ಬಾ | ತ್ರಿದಶಗುಣನುತ ವಿಲಾಸಾ ಬಾ | ಪದುಮನಾಭ ಮಾಧವ ಶ್ರೀಧರನೆ ಸುನಾಸಾ ಬಾ || ಸಿರಿಮಂದಹಾಸಾ ಬಾ | ಭಕುತ ಉಲ್ಲಾಸಾ ಬಾ | ಶ್ರೀ ಶ್ರೀನಿವಾಸಾ ಬಾ ಹಸೆಯಾ ಜಗುಲಿಗೆ||8|| ಕೃಷ್ಣವೇಣಿಯ ಪಡೆದವನೆ ಬಾ | ರಥ ಹೊಡೆದವನೆ ಬಾ | ಕೃಷ್ಣೆಯ ಕಷ್ಟವ ನಷ್ಟ ಮಾಡಿದ ಕೃಷ್ಣಾ ಬಾ || ಯದುಕುಲ ಶ್ರೇಷ್ಠ ಬಾ | ಸತತ ಸಂತುಷ್ಟ ಬಾ | ಉಡುಪಿಯ ಕೃಷ್ಣ ಬಾ ಹಸೆಯಾ ಜಗುಲಿಗೆ ||9|| ಎಲ್ಲರೊಳಗೆ ವ್ಯಾಪಕನೆ ಬಾ ಬಲ್ಲಿದ ದೊರೆಗಳ ಅರಸನೆ ಬಾ | ನಾ ಎಲ್ಲಿ ನೋಡಲು ಪ್ರತಿಗಾಣೆ ನಿನಗೆ ಸಿರಿನಲ್ಲಾ ಬಾ || ಅಪ್ರತಿಮಲ್ಲ ಬಾ ಭಕ್ತವತ್ಸಲಾ ಬಾ | ವಿಜಯವಿಠ್ಠಲ ಬಾ ಹಸೆಯ ಜಗುಲಿಗೆ||10||

Thoughts & Reflections

0

No reflections shared yet. Be the first to share your thoughts!

Share your thought