Bhasaka
← Back to home

ಸವಿದುಣ್ಣ ಬಾರಯ್ಯ

Author: ವಿಜಯದಾಸCategory: ಶ್ರೀನರಸಿಂಹ
ಸವಿದುಣ್ಣ ಬಾರಯ್ಯ ಸಾರಾಭೋಕ್ತಾ ಪವನಾಂತರ್ಗತ ಕಪಿಲಾತ್ಮ ನರಸಿಂಗಾ ಉಪ್ಪು ಉಪ್ಪಿನಕಾಯಿ ಪತ್ರ ಶಾಖ ಸೂಪ ಒಪ್ಪುವ ಸಂಡಿಗೆ ವ್ಯಂಜನಗಳು ಇಪ್ಪವು ನಿರುಋತಿ ಪ್ರಾಣ ಮಿತ್ರ ಶೇಷ ಸರ್ಪವೈರಿ ದಕ್ಷ ಲೋಕೇಶನಲ್ಲಿಗೆ ||1|| ಅನ್ನ ಮಂಡಿಗೆ ತೈಲ ಪಕ್ವಂಗಳು ಪರ ಮಾನ್ನ ಭಕ್ಷ ತುಪ್ಪ ಹುಳಿ ಪದಾರ್ಥ ಮುನ್ನೆ ಚಂದ್ರ ಬೊಮ್ಮ ಜಯಂತರೈ ಸೂರ್ಯ ಕನ್ಯ ಲಕುಮಿದೇವಿ ಪರ್ವತ ಸುತಿ ಇರೆ||2|| ಕ್ಷೀರ ನವನೀತಧಿಕಾರಣಾಮ್ಲ ಚಾರು ಉದ್ದಿನ ಭಕ್ಷ ಕಟು ದ್ರವ್ಯ ಪಾ ವಾರಿಜಾಸನ ರಾಣಿ ವಾಯು ಸೋಮ ಮಾರ ವೈರಿ ಧರ್ಮ ಸ್ವಾಯಂಭುವಂಗಳು ಅಲ್ಲಿ ಹಾಕಿರೆ ||3|| ಇಂಗು ಯಾಲಕ್ಕಿ ಸಾಸಿವೆಯಿಂದ ವೊಪ್ಪುತಾ ಬಂಗಾರ ಪಾತ್ರಿಯೊಳಗೆ ತಂದಿಡೆ ಪೊಂಗಳಸದಲ್ಲಿ ಸ್ವಾದೋದಕ ಇಡೆ ಅಂಗಜಾ ದುರ್ಗಿಯ ಚಂದ್ರಮಸುತನಿರೆ ||4|| ವೀಳ್ಯವ ಕೈಕೊಳೊ ಗಂಗಾಜನಕ ಹರಿ ಅಲ್ಲಲ್ಲಿಗೆ ನಿನ್ನ ರೂಪವುಂಟು ಬಲ್ಲಿದಾ ವಿಜಯವಿಠ್ಠಲರೇಯ ಎನಗಿದೆ ಸಲ್ಲೊದೆ ಸರಿ ಲೇಶವಾಪೇಕ್ಷದವನಲ್ಲ||5||

Thoughts & Reflections

0

No reflections shared yet. Be the first to share your thoughts!

Share your thought