Bhasaka
← Back to home

ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ

Author: ವಿಜಯದಾಸCategory: ಶ್ರೀಕೃಷ್ಣ
ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ ಪಾರ ಜನುಮಕ್ಕೆ ನೀನೆ ದೈವವೆಂದು ಶೂನ್ಯಜ್ಞನು ನಾನು ಅನ್ಯಾಥಾ ಗತಿ ಅರಿಯೆ | ಅನ್ಯರಲ್ಲಿಗೆ ಕೊಡದೆ ಧನ್ಯನ ಮಾಡೊ ಬಿಡದೆ ||1|| ಕಲ್ಪತರುವೆ ಎಂದು ವಪ್ಪದಿಂದಲಿ ಬಂದೆ | ಆಲ್ಪರಿಯದಂತೆ ನಾಗತಲ್ಪನೆ ಫಲವೀಯೋ ||2|| ವರುಷಾವರುಷ ಹೀಗೆ ದರುಶನಕೊಡು ಎನಗೆ | ಹರುಷವಾಗಲಿ ಪರಮಪುರುಷ ವಿಜಯವಿಠ್ಠಲಾ ||3||

Thoughts & Reflections

0

No reflections shared yet. Be the first to share your thoughts!

Share your thought