Bhasaka
← Back to home

ಹರಿದಾಸನಾದರೆ ಹ್ಯಾಂಗಿರಲಿ ಬೇಕು

Author: ವಿಜಯದಾಸCategory: ಶ್ರೀಕೃಷ್ಣ
ಹರಿದಾಸನಾದರೆ ಹ್ಯಾಂಗಿರಲಿ ಬೇಕು ನರಲೋಕದ ಚಿಂತೆ ಬಿಟ್ಟುಕೊಡಬೇಕು ಇಂದು ನಾಳಿಗೆಯೆಂಬ ಯೋಚನೆಯ ಬಿಡಬೇಕು ಇಂದ್ರಿಯಗಳನ್ನೆಲ್ಲ ಗ್ರಹಿಸಬೇಕು ಬಂದದೆಲ್ಲ ಬರಲಿ ಈಗಲೇ ಎನಬೇಕು ಅಂದವರು ಎನಗೆ ಬಂಧುಗಳು ಎನಬೇಕು ||1|| ಸ್ನಾನವನು ಬಿಟ್ಟು ಹರಿಕಥೆಯ ಕೇಳಲಿ ಬೇಕು ದಾನಕ್ಕೆ ಸಮ್ಮೊಗನಾಗಬೇಕು ಮಾನಾಭಿಮಾನಕ್ಕೆ ಹರಿತಾನೆ ಎನಬೇಕು ಏನಾದರಾಗಲಿ ಸುಖಬಡಲಿಬೇಕು ||2|| ಇರಳು ಹಗಲು ಹರಿಸ್ಮರಣೆ ಮಾಡಲಿ ಬೇಕು ಪರಲೋಕದ ಗತಿ ಬಯಸಬೇಕು ಗುರುಹಿರಿಯರಿಗೆ ವಂದನೆಯ ಮಾಡಲಿ ಬೇಕು ದುರುಳರನ ಕಂಡರೆ ದೂರಾಗಬೇಕು ||3|| ತಾವರೆಮಣಿ ತುಲಸಿಸರವ ಧರಿಸಲಿಬೇಕು ಭಾವಶುದ್ಧನಾಗಿ ತಿರುಗಬೇಕು ಕೋವಿದರೆ ಸಂಗಡ ಕೂಡ್ಯಾಡುತಿರಬೇಕು ಪಾವಕನಂತೆ ಇಂಪವ ಕಾಣಬೇಕು ||4|| ಅನ್ನಪಾನಾದಿಗಳಿಗವಸರ ಬೀಳದಿರಬೇಕು ಕಣ್ಣಿದ್ದು ಕುರುಡನೆಂದೆನಿಸಬೇಕು ಚೆನ್ನಾಗಿ ವಾಯುಮತದಲ್ಲಿ ನಿಂದಿರಬೇಕು ತನ್ನೊಳಗೆ ತಾ ತಿಳಿದು ನಗುತಲಿರಬೇಕು ||5|| ಬಿಂಬ ಮೂರುತಿಯ ಹೃದಯದಲಿ ನಿಲಿಸಲಿ ಬೇಕು ಡಂಭಕ ಭಕುತಿಯ ಜರಿಯ ಬೇಕು ಡಿಂಬುವನು ದಂಡಿಸಿ ವ್ರತವ ಚರಿಸಲಿ ಬೇಕು ನಂಬಿ ನರಹರಿಪಾದವೆನುತ ಸಾರಲಿ ಬೇಕು||6|| ಹರಿಯಿಲ್ಲದನ್ಯತ್ರ ದೈವವಿಲ್ಲೆನ ಬೇಕು ಮರುತನೆ ಜಗಕೆ ಗುರುವೆನಲಿ ಬೇಕು ಪುರಂದರದಾಸರೇ ದಾಸರೆಂದನ ಬೇಕು ಸಿರಿ ವಿಜಯವಿಠ್ಠಲನ ಸ್ಮರಣೆ ಮಾಡಲಿ ಬೇಕು ||7||

Thoughts & Reflections

0

No reflections shared yet. Be the first to share your thoughts!

Share your thought