Bhasaka
← Back to home

ಹರಿಮಣಿವರ್ಣ ವಿಠ್ಠಲಾ ನಿನ್ನವನೊ

Author: ವಿಜಯದಾಸCategory: ಶ್ರೀಕೃಷ್ಣ
ಹರಿಮಣಿವರ್ಣ ವಿಠ್ಠಲಾ ನಿನ್ನವನೊ ಪರಮ ಪ್ರೀತಿಯಿಂದ ಪಾಲಿಸ ಬಾರಯ್ಯ ಹೃದಯ ಪಂಕಜ ದಳ ಕೂಡಿತು ನೋಡು ಮುದರಿಕೊಂಡವು ಕುಮುದವೆಂಬೊ ಕಣ್ಣು ಪದುಮನಾಭನೆ ನಿನ್ನ ನಖವೆಂಬೊ ರವಿ ವದನವೆಂಬೊ ಚಂದ್ರಮಾ ಉದಿಸಲಿ ||1|| ಬಿರಿದಾಗಿ ಕಿವಿ ಎಂಬೊ ಮನೆ ಇಪ್ಪವು ಸ್ಪರಿಶ ಮಾಡುವೆನೆಂದು ಕಲಿ ಸುಳಿದಾ ಹರಿ ನಿನ್ನ ಗೆಜ್ಜೆ ಧ್ವನಿಯಿಂದ ಕರ್ಣ ಮಂದಿರವೆ ತುಂಬಲಿ ಕಲಿ ಅಡಗಿ ಪೋಪಾ ||2|| ನಾಸಾ ದುರ್ವಾಸನೆಗೆ ಇಚ್ಛೆ ಮಾಡಿತು ಹೇಸಿಗೆ ರಸಗಳಿಗೆ ಜಿವ್ವೆ ಪೋಗುದದು ಪೂಸಿದಾ ಗಂಧ ದಿವ್ಯವಾಸನೆ ಬರಲಿ ಲೇಸು ನಿನ್ನ ನಾಮರಸ ಸುರಿಸುವಂತೆ ಮಾಡು||3|| ನೀನಲ್ಲದೆ ತುಲಾ ಕಾವೇರಿಯೊಳಗೆ ಸ್ನಾನ ಜಪ ತಪಗಳು ಮಾಡುವದೇಕೆ ಕಾಣದಿರೆ ನಿನ್ನ ಚರಣ ಸಿರಿ ಪ್ರಾಣರಿಗೆ ಪ್ರಾಣನಾದ ಬಲು ಮೋಹನಾ ||4|| ಈ ಕ್ರೋಧನಾಬ್ಧ್ದ ಆಶ್ವಿಜ ನಿನ್ನ ಪಕ್ಷದ ಏಕಾದಶಿ ರಾತ್ರಿಯೊಳು ಬಾ ಹೃದಯದೊಳಗೆ ಯಾಕೆ ಕೂಡದಯ್ಯ ಜೀಯಾ ಪೇಳೊ ಎನ್ನೊಡಿಯ ಲೋಕ ಚರಿಸುವದೇನು ನಿನ್ನ ಪೋಗಾಡಿ ||5|| ಧವಳಗಂಗಿಯೊಳಂದು ಬಿದ್ದು ಬಂದಾಗ ಕವಿ ವಾದಿರಾಜಗೊಲಿದು ಬರಲಿಲ್ಲವೇ ಅವರ ದಾಸಾನುದಾಸನು ಸತತ ನಾನು ತವಕದಿಂದಲಿ ಬಾರೊ ಭಕ್ತವತ್ಸಲಾ||6|| ಅರ್ಚಿಸಬಲ್ಲನೆ ದೇವ ನಿನ್ನನುದಿನಾ ಗಚ್ಚರಿತವಂದಲ್ಲವೆ ಮತ್ತಾವದರಿಯೆ ಅಚ್ಯುತದಾಸರ ಪ್ರೀಯ ವಿಜಯವಿಠ್ಠಲ ಬೆಚ್ಚಿಸಿದೋಪಾದಿಯಲ್ಲಿ ಪೊಂದಿ ಬಾರಯ್ಯ ||7||

Thoughts & Reflections

0

No reflections shared yet. Be the first to share your thoughts!

Share your thought