Bhasaka
← Back to home

ಅಗ್ನಿ ಸರ್ವವ್ಯಾಪಕನಾಗಿರುವಂತೆ

Author: ಅಕ್ಕಮಹಾದೇವಿCategory: ವಚನಗಳು
ಅಗ್ನಿ ಸರ್ವವ್ಯಾಪಕನಾಗಿರುವಂತೆ ಚಿದ್ವಹ್ನಿರೂಪನಾದ ಶಿವನು ಸರ್ವವ್ಯಾಪಕನಾಗಿರ್ಪನು. ಹೃದಯಕಮಲವು ಮುಕುರದೋಪಾದಿಯಲ್ಲಿ ಪ್ರಕಾಶಿಸುತಿರ್ದಪುದು. ಆ ಕನ್ನಡಿಯೋಪಾದಿಯ ಹೃದಯಕಮಲದಲ್ಲಿ ವ್ಯಾಪಕನಾದ ಶಿವನು, ಆತ್ಮನೆನಿಸಿಕೊಂಡು ಪ್ರತಿಬಿಂಬಿಸುತಿರ್ದಪನು. ವೇದೋಪನಿಷದ್ಗಾಯತ್ರಿ ಪ್ರಸಿದ್ಧವಾದೀ ರಹಸ್ಯವ ಗುರೂಪದೇಶದಿಂ ತಿಳಿವುದಯ್ಯಶ್ರೀ ಚೆನ್ನಮಲ್ಲಿಕಾರ್ಜುನದೇವಾ.

Thoughts & Reflections

0

No reflections shared yet. Be the first to share your thoughts!

Share your thought