Bhasaka
← Back to home

ಅರಿವು ಸಾಧ್ಯವಾಯಿತ್ತೆಂದು,

Author: ಅಕ್ಕಮಹಾದೇವಿCategory: ವಚನಗಳು
ಅರಿವು ಸಾಧ್ಯವಾಯಿತ್ತೆಂದು, ಗುರುಲಿಂಗಜಂಗಮವ ಬಿಡಬಹುದೆ ? ಸಂದು ಸಂಶಯವಳಿದು ಅಖಂಡ ಜ್ಞಾನವಾಯಿತ್ತೆಂದು ಪರಧನ ಪರಸ್ತ್ರೀಯರುಗಳಿಗೆ ಅಳುಪಬಹುದೆ ? 'ಯತ್ರ ಜೀವಃ ತತ್ರ ಶಿವಃ' ಎಂಬ ಅಭಿನ್ನ ಜ್ಞಾನವಾಯಿತ್ತೆಂದು ಶುನಕ ಸೂಕರ ಕುಕ್ಕುಟ ಮಾರ್ಜಾಲಂಗಳ ಕೂಡೆ ಭುಂಜಿಸಬಹುದೆ ? ಭಾವದಲ್ಲಿ ತನ್ನ ನಿಜದ ನೆಲೆಯನರಿತಿಹುದು' ಸುe್ಞನ ಸತ್ಕ್ರಿಯಾ ಸುನೀತಿ ಮಾರ್ಗದಲ್ಲಿ ವರ್ತಿಸುವುದು. ಹೀಂಗಲ್ಲದೆ e್ಞನವಾಯಿತ್ತೆಂದು ತನ್ನ ಮನಕ್ಕೆ ಬಂದಹಾಂಗೆ ಮೀರಿನುಡಿದು ನಡೆದೆನಾದಡೆಶ್ವಾನಗರ್ಭದಲ್ಲಿ ಹುಟ್ಟಿಸದೆ ಬಿಡುವನೆ ಚೆನ್ನಮಲ್ಲಿಕಾರ್ಜುನಯ್ಯನು ?

Thoughts & Reflections

0

No reflections shared yet. Be the first to share your thoughts!

Share your thought