Bhasaka
← Back to home

ಅರ್ಥಸನ್ಯಾಸಿಯಾದಡೇನಯ್ಯಾ,

Author: ಅಕ್ಕಮಹಾದೇವಿCategory: ವಚನಗಳು
ಅರ್ಥಸನ್ಯಾಸಿಯಾದಡೇನಯ್ಯಾ, ಆವಂಗದಿಂದ ಬಂದಡೂ ಕೊಳದಿರಬೇಕು. ರುಚಿಸನ್ಯಾಸಿಯಾದಡೇನಯ್ಯಾ, ಜಿಹ್ವೆಯ ಕೊನೆಯಲ್ಲಿ ಮಧುರವನರಿಯದಿರಬೇಕು. ಸ್ತ್ರೀ ಸನ್ಯಾಸಿಯಾದಡೇನಯ್ಯಾ, ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ತಟ್ಟಿಲ್ಲದಿರಬೇಕು. ದಿಗಂಬರಿಯಾದಡೇನಯ್ಯಾ, ಮನ ಬತ್ತಲೆ ಇರಬೇಕು. ಇಂತೀ ಚತುರ್ವಿಧದ ಹೊಲಬರಿಯದೆ ವೃಥಾ ಕೆಟ್ಟರುಕಾಣಾ ಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought