Bhasaka
← Back to home

ಬಿನ್ನಹಕೆ ಬಾಯಿಲ್ಲವಯ್ಯ

Author: ಪುರಂದರದಾಸCategory: ಶ್ರೀಕೃಷ್ಣRaaga: ಶಿವರಂಜಿನಿTaala: ಝಪತಾಲ
ಬಿನ್ನಹಕೆ ಬಾಯಿಲ್ಲವಯ್ಯ ಅನಂತ ಅಪರಾಧ ಎನ್ನೊಳಗೆ ಇರಲಾಗಿ || ಶಿಶುಮೋಹ ಸತಿಮೋಹ ಜನನಿ-ಜನಕರ ಮೋಹ ರಸಿಕ ಭ್ರಾತರ ಮೋಹ ರಾಜಮೋಹ | ಪಶುಮೋಹ ಭೂಮೋಹ ಬಂಧುವರ್ಗದ ಮೋಹ ಅಸುರಾರಿ ನಿನ್ನ ಮರೆತೆನೋ ಕಾಯೋ ಹರಿಯೇ || ಅನ್ನಮದ ಅರ್ಥಮದ ಅಖಿಲ ವೈಭವದ ಮದ ಮುನ್ನ ಪ್ರಾಯದ ಮದವು ರೂಪಮದವು | ತನ್ನ ಸತ್ವದ ಮದ ಧಾತ್ರಿವಶದ ಮದ ಇನ್ನು ತನಗೆದುರಿಲ್ಲವೆಂತೆಂಬ ಮದದಿಂದ || ಇಷ್ಟು ದೊರಕಿದರೆ ಮತ್ತಿಷ್ಟು ಬೇಕೆಂಬಾಸೆ ಅಷ್ಟು ದೊರಕಿದರೆ ಮತ್ತಿಷ್ಟರಾಸೆ | ಕಷ್ಟ ಬೇಡೆಂಬಾಸೆ ಕಡುಸುಖವ ಕಾಂಬಾಸೆ ನಷ್ಟಜೀವನದಾಸೆ ಪುರಂದರವಿಟ್ಠಲ ||

Thoughts & Reflections

0

No reflections shared yet. Be the first to share your thoughts!

Share your thought