Bhasaka
← Back to home

ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ.

Author: ಅಕ್ಕಮಹಾದೇವಿCategory: ವಚನಗಳು
ಆಹಾರವ ಕಿರಿದು ಮಾಡಿರಣ್ಣಾ, ಆಹಾರವ ಕಿರಿದು ಮಾಡಿ. ಆಹಾರದಿಂದ ವ್ಯಾಧಿ ಹಬ್ಬಿ ಬಲಿವುದಯ್ಯಾ. ಆಹಾರದಿಂ ನಿದ್ರೆ, ನಿದ್ರೆಯಿಂ ತಾಮಸ, ಅಜ್ಞಾನ, ಮೈಮರಹು, ಅಜ್ಞಾನದಿಂ ಕಾಮವಿಕಾರ ಹೆಚ್ಚಿ, ಕಾಯವಿಕಾರ, ಮನೋವಿಕಾರ, ಇಂದ್ರಿಯವಿಕಾರ, ಭಾವವಿಕಾರ, ವಾಯುವಿಕಾರವನುಂಟುಮಾಡಿ, ಸೃಷ್ಟಿಗೆ ತಹುದಾದ ಕಾರಣ ಕಾಯದ ಅತಿಪೆಷಣ ಬೇಡ. ಅತಿ ಪೆಷಣೆ ಮೃತ್ಯುವೆಂದುದು. ಜಪ ತಪ ಧ್ಯಾನ ಧಾರಣ ಪೂಜೆಗೆ ಸೂಕ್ಷ್ಮದಿಂ ತನುಮಾತ್ರವಿದ್ದರೆ ಸಾಲದೆ ತನುವ ಪೆಷಿಸುವ ಆಸೆ ಯತಿತ್ವಕ್ಕೆ ವಿಫ್ಸ್ನವೆಂದುದು. ತನು ಪೆಷಣೆಯಿಂದ ತಾಮಸ ಹೆಚ್ಚಿ, ಅಜ್ಞಾನದಿಂ ವಿರಕ್ತಿ ಹಾನಿ, ಅರಿವು ನಷ್ಟ, ಪರವು ದೂರ, ನಿರಕೆ ನಿಲವಿಲ್ಲದ ಕಾರಣ. ಚೆನ್ನಮಲ್ಲಿಕಾರ್ಜುನನೊಲಿಸ ಬಂದ ಕಾಯವ ಕೆಡಿಸದೆ ಉಳಿಸಿಕೊಳ್ಳಿರಯ್ಯಾ.

Thoughts & Reflections

0

No reflections shared yet. Be the first to share your thoughts!

Share your thought