Bhasaka
← Back to home

ಭರತಖಂಡದ ನೀಲಗಗನವ

Author: ಕುವೆಂಪುCategory: ಶ್ರೀರಾಮಕೃಷ್ಣRaaga: ಮಧುವಂತಿTaala: ಝಪತಾಲ
ಭರತಖಂಡದ ನೀಲಗಗನವ ತಿಮಿರ ಮುಸುಗಿರಲು, ಭಾರತೀಯರು ತಮ್ಮ ಧ್ಯೇಯವ ಮರೆತು ಮಲಗಿರಲು , ಪರಮಹಂಸನೆ, ಉದಯಸೂರ್ಯನ ತೆರದಿ ರಂಜಿಸಿದೆ ಹೃದಯ ನಭದ ಜ್ಞಾನತಿಮಿರವನಿರದೆ ಭಂಜಿಸಿದೆ ಸರ್ವಮಾರ್ಗಗಳೊಂದೆ ನಿಲಯಕೆ ಪೋಪುವೆಂಬುದನು ಯೋಗವಿದ್ಯೆಯೊಳರಿತು ಮಾನವಕುಲಕೆ ಬೋಧಿಸಿದೆ; ಕ್ರೈಸ್ತ ಹಿಂದೂ ಮಹಮದೀಯರೆ ಬೌದ್ಧಮೊದಲಾದ ಮತಗಳಾತ್ಮವದೊಂದೆ ಎಂಬುದ ತಿಳುಹಿ ಪಾಲಿಸಿದೆ ಕ್ರಿಸ್ತ ಮಹಮದ ರಾಮ ಕೃಷ್ಣ ಜೊರಾಸ್ತ್ರ ಗೌತಮರು ದಿವ್ಯ ವೇದ ಕೊರಾನು ಬೈಬಲು ತಲ್ಮಡಾದಿಗಳು ಗುಡಿಯು ಚರ್ಚು ಮಸೀದಿ ಆಶ್ರಮ ಅಗ್ನಿಪೂಜೆಗಳು ಕಾಶಿ ಮಕ್ಕಗಳೆಲ್ಲ ನಿನ್ನೊಳಗೈಕ್ಯ 'ವಾಗಿಹವು' | ದಕ್ಷಿಣೇಶ್ವರ ದೇವನಿಲಯದ ಪರಮಯೋಗೀಂದ್ರ ಶ್ರೀ ವಿವೇಕಾನಂದ ಪೂಜಿತನಾತ್ಮಭಾವಿತನೆ ಲೋಕಜೀವರಿಗಾತ್ಮಶಕ್ತಿಯ ನೀಡಿ ಕಾಪಾಡು ನೆನೆವರೆಲ್ಲರ ಹೃದಯವಾಗಲಿ ನಿನ್ನ ನೆಲೆವೀಡು |

Thoughts & Reflections

0

No reflections shared yet. Be the first to share your thoughts!

Share your thought