Bhasaka
← Back to home

ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ,

Author: ಅಕ್ಕಮಹಾದೇವಿCategory: ವಚನಗಳು
ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ, ಹಲವು ಪ್ರಾಣಿಯ ಕೊಂದು, ನಲಿನಲಿದಾಡುವ. ತನ್ನ ಮನೆಯಲೊಂದು ಶಿಶು ಸತ್ತಡೆ ಅದಕ್ಕೆ ಮರುಗುವಂತೆ ಅವಕೇಕೆ ಮರುಗ ? ಅದೆಂತೆಂದಡೆ 'ಸ್ವಾತ್ಮಾನಮಿತರಂ ಚೇತಿ ಭಿನ್ನತಾ ನೈವ ದೃಶ್ಯತಾಂ ಸರ್ವಂ ಚಿಜ್ಜ್ಯೋತಿರೇವೇತಿ ಯಃ ಪಶ್ಯತಿ ಸ ಪಶ್ಯತಿ' ಎಂದುದಾಗಿ, ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು ಜೀವಹಿಂಸೆ ಮಾಡುವ ಮಾದಿಗರನೇನೆಂಬೆನಯ್ಯಾ ?

Thoughts & Reflections

0

No reflections shared yet. Be the first to share your thoughts!

Share your thought