Bhasaka
← Back to home

ಲಿಂಗದಿಂದುದಯಿಸಿ ಅಂಗವಿಡಿದಿಪ್ಪ ಪುರಾತನರ

Author: ಅಕ್ಕಮಹಾದೇವಿCategory: ವಚನಗಳು
ಲಿಂಗದಿಂದುದಯಿಸಿ ಅಂಗವಿಡಿದಿಪ್ಪ ಪುರಾತನರ ಇಂಗಿತವನೇನೆಂದು ಬೆಸಗೊಂಬಿರಯ್ಯಾ ? ಅವರ ನಡೆಯೇ ಆಗಮ, ಅವರ ನುಡಿಯೇ ವೇದ ; ಅವರ ಲೋಕದಮಾನವರೆಂದೆನ್ನಬಹುದೆ ಅಯ್ಯಾ ? ಅದೆಂತೆಂದಡೆ, ಸಾಕ್ಷಿ 'ವೃಕ್ಷದ್ಭವತಿ ಬೀಜಂ ಹಿ ತದ್‍ವೃಕ್ಷೇ ಲೀಯತೇ ಪುನಃ ೀ ರುದ್ರಲೋಕಂ ಪರಿತ್ಯಕ್ತಾ ಶಿವಲೋಕೇ ಭವಿಷ್ಯತಿ || ' ಎಂದುದಾಗಿ, ಅಂಕೋಲೆಯಬೀಜದಿಂದಾಯಿತ್ತು ವೃಕ್ಷವು ; ಆ ವೃಕ್ಷ ಮರಳಿ ಆ ಬೀಜದೊಳಡಗಿತ್ತು. ಆ ಪ್ರಕಾರದಲ್ಲಿ ಲಿಂಗದೊಳಗಿಂದ ಪುರಾತನರುದ್ಭವಿಸಿ, ಮರಳಿ ಆ ಪುರಾತನರು ಆ ಲಿಂಗದೊಳಗೆ ಬೆರಸಿದರು ನೋಡಿರಯ್ಯಾ. ಇಂತಪ್ಪ ಪುರಾತನರಿಗೆ ನಾನು ಶರಣೆಂದು ಹುಟ್ಟುಗೆಟ್ಟೆನಯ್ಯಾ ಚೆನ್ನಮಲ್ಲಿಕಾರ್ಜುನಾ.

Thoughts & Reflections

0

No reflections shared yet. Be the first to share your thoughts!

Share your thought