Bhasaka
← Back to home

ರಾಗಿ ತಂದೀರ್ಯಾ

Author: ಪುರಂದರದಾಸCategory: ಶ್ರೀಕೃಷ್ಣRaaga: ಕಲಾವತೀTaala: ಕವಾಲೀ
ರಾಗಿ ತಂದೀರ್ಯಾ ಭಿಕ್ಷಕೆ ರಾಗಿ ತಂದೀರ್ಯಾ | ಯೋಗ್ಯರಾಗಿ ಭೋಗ್ಯರಾಗಿ ಭಾಗ್ಯವಂತರಾಗಿ ನೀವು || ಅನ್ನದಾನವ ಮಾಡುವರಾಗಿ ಅನ್ನಛತ್ರವನಿಟ್ಟವರಾಗಿ | ಅನ್ಯವಾರ್ತೆಯ ಬಿಟ್ಟವರಾಗಿ ಅನುದಿನ ಭಜನೆಯ ಮಾಡುವರಾಗಿ || ಮಾತಾಪಿತರನು ಸೇವಿಪರಾಗಿ ಪಾಪಕಾರ್ಯವ ಬಿಟ್ಟವರಾಗಿ | ರೀತಿಯ ಬಾಳನು ಬಾಳುವರಾಗಿ ನೀತಿಮಾರ್ಗದಲಿ ಖ್ಯಾತರಾಗಿ || ಗುರುಕಾರುಣ್ಯವ ಪಡೆದವರಾಗಿ ಗುರುವಾಕ್ಯವನು ಪಾಲಿಪರಾಗಿ | ಗುರುವಿನ ಪಾದವ ಸ್ಮರಿಸುವರಾಗಿ ಪರಮಪುಣ್ಯವ ಮಾಡುವರಾಗಿ || ಕಾಮಕ್ರೋಧವ ಅಳಿದವರಾಗಿ ನೇಮನಿಷ್ಠೆಗಳ ಮಾಡುವರಾಗಿ | ರಾಮನಾಮವ ಜಪಿಸುವರಾಗಿ ಪ್ರೇಮದಿ ಕುಣಿಕುಣಿದಾಡುವರಾಗಿ || ಹರಿಯನು ಅನುದಿನ ನೆನೆಯುವರಾಗಿ ಗುರುತಿಗೆ ಬಾಹೋರಂಥವರಾಗಿ | ಕರೆಕರೆ ಭವವನು ನೀಗುವರಾಗಿ ಪುರಂದರವಿಟ್ಠಲನ ಸೇವಿಪರಾಗಿ ||

Thoughts & Reflections

0

No reflections shared yet. Be the first to share your thoughts!

Share your thought