Bhasaka
← Back to home

ಅಂಗಲಿಂಗಸಂಗಸುಖಸಾರಾಯದನುಭಾವ

Author: ಬಸವಣ್ಣCategory: ವಚನಗಳು
ಅಂಗಲಿಂಗಸಂಗಸುಖಸಾರಾಯದನುಭಾವ ಲಿಂಗವಂತಂಗಲ್ಲದೆ ಸಾಧ್ಯವಾಗದು ನೋಡಾ. ಏಕಲಿಂಗಪರಿಗ್ರಾಹಕನಾದ ಬಳಿಕ, ಆ ಲಿಂಗನಿಷ್ಠೆ ಗಟ್ಟಿಗೊಂಡು, ಸ್ವಯಲಿಂಗಾರ್ಚನೋಪಚಾರ ಅರ್ಪಿತ ಪ್ರಸಾದಭೋಗಿಯಾಗಿ, ವೀರಶೈವಸಂಪನ್ನನೆನಿಸಿ ಲಿಂಗವಂತನಾದ ಬಳಿಕ ತನ್ನಂಗಲಿಂಗಸಂಬಂಧಕ್ಕನ್ಯವಾದ ಜಡಭೌತಿಕ ಪ್ರತಿಷ್ಠೆಯನುಳ್ಳ ಭವಿಶೈವದೈವಕ್ಷೇತ್ರತೀರ್ಥಂಗಳಾದಿಯಾದ ಹಲವು ಲಿಂಗಾರ್ಚನೆಯ ಮನದಲ್ಲಿ ನೆನೆ[ಯ]ಲಿಲ್ಲ, ಮಾಡಲೆಂತೂ ಬಾರದು. ಇಷ್ಟೂ ಗುಣವಳವಟ್ಟಿತ್ತಾದಡೆ ಆತನೀಗ ಏಕಲಿಂಗನಿಷ್ಠಾಚಾರಯುಕ್ತನಾದ ವೀರಮಾಹೇಶ್ವರನು. ಇವರೊಳಗೆ ಅನುಸರಿಸಿಕೊಂಡು ನಡೆದನಾದಡೆ ಗುರುಲಿಂಗಜಂಗಮಪಾದೋದಕಪ್ರಸಾದ ಸದ್ಭಕ್ತಿಯುಕ್ತವಾದ ವೀರಶೈವ ಷಡುಸ್ಥಲಕ್ಕೆ ಹೊರಗಾಗಿ ನರಕಕ್ಕಿಳಿವನು ಕಾಣಾ, ಕೂಡಲಸಂಗಮದೇವಾ.

Thoughts & Reflections

0

No reflections shared yet. Be the first to share your thoughts!

Share your thought