Bhasaka
← Back to home

ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ,

Author: ಬಸವಣ್ಣCategory: ವಚನಗಳು
ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ, ಸಮಯವನರಿಯೆ, ಅಯ್ಯಾ, ನಾನು ಭಕ್ತಿಯ ಮಾಡುವೆನಲ್ಲದೆ, ಭಾವವನರಿಯೆ. ಸ್ಥಳಕುಳವ ವಿಚಾರಿಸಿದಡೆ, ಎನ್ನಲ್ಲಿ ಏನೂ ಹುರುಳಿಲ್ಲ, ನಿಮ್ಮ ಶರಣರ ಸೋಂಕಿನಲ್ಲಿ ಶುದ್ಧನಾದೆನು. ಕೂಡಲಸಂಗಮದೇವರು ಸಾಕ್ಷಿಯಾಗಿ, ಮಡಿವಾಳ ಮಾಚಿತಂದೆಗಳ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು.

Thoughts & Reflections

0

No reflections shared yet. Be the first to share your thoughts!

Share your thought