Bhasaka
← Back to home

ಅಯ್ಯಾ, ನಿಮ್ಮ ದೇವರೆಂದು ನಂಬಿ

Author: ಬಸವಣ್ಣCategory: ವಚನಗಳು
ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ಮೀನಜ, ರೋಮಜ ಮಹಾಮುನಿಗಳ ಲಯವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ನವಕೋಟಿಬ್ರಹ್ಮರಿಗೆ ಪ್ರಳಯವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ದಶಕೋಟಿ ನಾರಾಯಣರಿಗೆ ಮರಣವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :ಅನಂತಕೋಟಿರುದ್ರರಿಗೆ ಲಯವ ಮಾಡುವುದ ನಾ ಬಲ್ಲೆನಾಗಿ. ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ : ಎನ್ನನೇಳೇಳು ಭವಕ್ಕೆ ತಂದಲ್ಲಿ,ಆನುಭಯಲಿಂಗಜಂಗಮದ ಮೊರೆಹೊಕ್ಕು ಭವಂ ನಾಸ್ತಿಯಾಗಿ ಬದುಕಿದೆನಯ್ಯಾ, ಕೂಡಲಸಂಗಮದೇವಾ.

Thoughts & Reflections

0

No reflections shared yet. Be the first to share your thoughts!

Share your thought